ADVERTISEMENT

ರಸ್ತೆಗಿಳಿಯದ ಸಾರಿಗೆ ಸಂಸ್ಥೆ ಬಸ್: ಖಾಸಗಿ ಬಸ್ ಸಂಚಾರ ಆರಂಭ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2021, 2:34 IST
Last Updated 7 ಏಪ್ರಿಲ್ 2021, 2:34 IST
 ಸಾರಿಗೆ ಸಂಸ್ಥೆ ಬಸ್ ಸಂಚಾರ ಸಂಪೂರ್ಣ ಸ್ತಬ್ದ
ಸಾರಿಗೆ ಸಂಸ್ಥೆ ಬಸ್ ಸಂಚಾರ ಸಂಪೂರ್ಣ ಸ್ತಬ್ದ   

ಕಲಬುರ್ಗಿ: ವೇತನ ಹೆಚ್ಚಳ ಮಾಡಬೇಕು‌ ಎಂದು ಒತ್ತಾಯಿಸಿ ಸಾರಿಗೆ ‌ಸಂಸ್ಥೆಗಳ ನೌಕರರು ನಡೆಸುತ್ತಿರುವ ಅನಿರ್ದಿಷ್ಟ ಅವಧಿಯ ಮುಷ್ಕರದ‌ ನಿಮಿತ್ತ ಯಾವೊಬ್ಬ ಸಿಬ್ಬಂದಿಯೂ ಕರ್ತವ್ಯಕ್ಕೆ ಹಾಜರಾಗಲಿಲ್ಲ.

ಇದರಿಂದಾಗಿ ಸಾರಿಗೆ ಸಂಸ್ಥೆ ಬಸ್ಸಂಚಾರ ಸಂಪೂರ್ಣ ಸ್ತಬ್ದವಾಗಿದೆ. ಆಯ್ದ ಮಾರ್ಗಗಳಲ್ಲಿ ಖಾಸಗಿ ಬಸ್ ಸಂಚಾರ ಆರಂಭಗೊಂಡಿದೆ. ಮುಷ್ಕರದ ಮಾಹಿತಿ ಇದ್ದುದರಿಂದ ನಿಲ್ದಾಣದಲ್ಲಿಪ್ರಯಾಣಿಕರ ಸಂಖ್ಯೆಯೂ ಕಡಿಮೆ ಇದೆ.

ಕೆಲಖಾಸಗಿ ಬಸ್‌ಗಳು ಹುಮನಾಬಾದ್-ಬೀದರ್, ಬಳ್ಳಾರಿ ಮಾರ್ಗದಲ್ಲಿ ಸಂಚಾರ ನಡೆಸಿದವು.

ADVERTISEMENT

ಸಾಧ್ಯವಾದಷ್ಟು ಮಾರ್ಗಗಳಲ್ಲಿ ಸಾರಿಗೆ ‌ಸಂಸ್ಥೆ ಬಸ್ ಓಡಿಸಲು ಸಂಸ್ಥೆ ಅಧಿಕಾರಿಗಳು ಪ್ರಯತ್ನ ‌ಮುಂದುವರಿಸಿದ್ದಾರೆ. ಆದರೆ, ಸಿಬ್ಬಂದಿ ‌ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.