ADVERTISEMENT

ಲ್ಯಾಬ್‌ ಟೆಕ್ನಿಷಿಯನ್‌ಗಳ ಸಂಘದ ಪದಾಧಿಕಾರಿಗಳ ಆಯ್ಕೆ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2020, 1:29 IST
Last Updated 30 ನವೆಂಬರ್ 2020, 1:29 IST
ಕಲಬುರ್ಗಿಯಲ್ಲಿ ನಡೆದ ಸರ್ಕಾರಿ ವೈದ್ಯಕೀಯ ಪ್ರಯೋಗಶಾಲಾ ಟೆಕ್ನಾಲಜಿಸ್ಟರ ಸಂಘದ ಸಾಮಾನ್ಯ ಸಭೆಯಲ್ಲಿ ನೂತನ ಅಧ್ಯಕ್ಷ ಶರಣಬಸಪ್ಪ ಅರಳಿಮರ ಸೇರಿದಂತೆ ನೂತನ ಪದಾಧಿಕಾರಿಗಳು ಇದ್ದರು
ಕಲಬುರ್ಗಿಯಲ್ಲಿ ನಡೆದ ಸರ್ಕಾರಿ ವೈದ್ಯಕೀಯ ಪ್ರಯೋಗಶಾಲಾ ಟೆಕ್ನಾಲಜಿಸ್ಟರ ಸಂಘದ ಸಾಮಾನ್ಯ ಸಭೆಯಲ್ಲಿ ನೂತನ ಅಧ್ಯಕ್ಷ ಶರಣಬಸಪ್ಪ ಅರಳಿಮರ ಸೇರಿದಂತೆ ನೂತನ ಪದಾಧಿಕಾರಿಗಳು ಇದ್ದರು   

ಕಲಬುರ್ಗಿ: ನಗರದಲ್ಲಿ ಭಾನುವಾರ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಕೀಯ ಪ್ರಯೋಗಶಾಲಾ ಟೆಕ್ನಾಲಜಿಸ್ಟರ ಸಂಘದ ಅಧ್ಯಕ್ಷರಾಗಿ ಶರಣಬಸಪ್ಪ ಎಸ್. ಅರಳಿಮರ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ನಂದಿ ಜಿ.ಬಿ., ಪ್ರಧಾನ ಕಾರ್ಯದರ್ಶಿಯಾಗಿ ಇಮ್ತಿಯಾಜ್ ಅಲಿ, ಕೋಶಾಧ್ಯಕ್ಷೆಯಾಗಿ ಸುಮಂಗಳಾ ಅವಿರೋಧವಾಗಿ ಆಯ್ಕೆಯಾದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜಶೇಖರ ಮಾಲಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಅಂಬಾರಾಯ ರುದ್ರವಾಡಿ, ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ. ಪ್ರಭುಲಿಂಗ ಮಾನಕರ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ರಾಜು ಲೇಂಗಟಿ, ಉಪಾಧ್ಯಕ್ಷ ಚಂದ್ರಕಾಂತ ಏರಿ, ಸತೀಶ ಜೋಶಿ, ಮಲ್ಲಿಕಾರ್ಜುನ ಹಾಗೂ ಜಿಲ್ಲೆಯ ಪ್ರಯೋಗಶಾಲಾ ಟೆಕ್ನಾಲಾಜಿಸ್ಟ್‌ಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT