ಕಲಬುರ್ಗಿ: ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಮೈನಾಳ ಗ್ರಾಮದ ಹೊರವಲಯದಲ್ಲಿ ಭೂಮಿ ಬಿರುಕು ಬಿಟ್ಟಿದ್ದು, ಜನರು ಭಯಭೀತರಾಗಿದ್ದಾರೆ.
ಸುಮಾರು 60ರಿಂದ 70 ಗಜದಷ್ಟು ಭೂಮಿ ಬಿರುಕು ಬಿಟ್ಟಿದ್ದು, ಇನ್ನೂ ಬಿರುಕಿನ ಪ್ರಮಾಣ ಜಾಸ್ತಿಯಾಗುತ್ತಲೇ ಇದೆ.
ಈ ಬಗ್ಗೆ ಪರಿಶೀಲಿಸಲು ಭೂವಿಜ್ಞಾನಿಗಳನ್ನು ಗ್ರಾಮಕ್ಕೆ ಕಳಿಸಬೇಕು ಎಂದು ಅಫಜಲಪುರ ಶಾಸಕ ಎಂ.ವೈ. ಪಾಟೀಲ ಅವರು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರಿಗೆ ಪತ್ರ ಬರೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.