
ಕಲಬುರಗಿ: ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ ಕನ್ನಡ ಬಾರದ ಸರ್ಕಾರಿ ನೌಕರರು ಹಾಗೂ ಸಾರ್ವಜನಿಕರಿಗೆ 1 ವರ್ಷ ಅಂಚೆ ಮೂಲಕ ಕನ್ನಡ ಕಲಿಸಲು ಯೋಜನೆ ರೂಪಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ನಿಗದಿತ ಅರ್ಜಿ ನಮೂನೆ ಮತ್ತು ತರಬೇತಿ ವಿವರಗಳನ್ನು ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆಯಿಂದ ಪಡೆಯಬೇಕು. ಭರ್ತಿ ಮಾಡಿದ ಅರ್ಜಿಯನ್ನು ಪ್ರಭಾರ ಅಧಿಕಾರಿ, ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ, ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಮಾನಸಗಂಗೋತ್ರಿ, ಮೈಸೂರು-570006. ಈ ವಿಳಾಸಕ್ಕೆ 2026ರ ಜನವರಿ 10ರೊಳಗಾಗಿ ತಲುಪುವಂತೆ ಕಳುಹಿಸಬೇಕು. ಅರ್ಜಿಯ ಜೊತೆಗೆ ₹250 ಡಿ.ಡಿ ಕಳುಹಿಸಿ ಕೊಡಬೇಕು.
ನೋಂದಾಯಿತರಿಗೆ ಇಪ್ಪತ್ತು ಪಾಠಾವಳಿ ಕಳುಹಿಸಲಾಗುತ್ತದೆ. ತರಬೇತಿ ಮತ್ತು ಸಂಪರ್ಕ ಶಿಬಿರದ ಅಂತ್ಯದಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ರಾಜ್ಯ ಸರ್ಕಾರಿ ನೌಕರರು ಸಂಪರ್ಕ ಶಿಬಿರ, ಪರೀಕ್ಷೆಗಳಿಗೆ ಹಾಜರಾದಾಗ ಅವರ ಕಚೇರಿ ಗೈರು ಹಾಜರಿಯನ್ನು ಅನ್ಯಕಾರ್ಯ ನಿಮಿತ್ತ ಎಂದು ಪರಿಗಣಿಸಲಾಗುತ್ತದೆ ಎಂದು ಸಂಸ್ಥೆಯ ಪ್ರಭಾರ ಅಧಿಕಾರಿ ಪಿ.ಆರ್.ಧರ್ಮೇಶ್ ಫರ್ನಾಂಡಿಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.