ADVERTISEMENT

ನಾರಾಯಣ ಸ್ವಾಮಿ ಕ್ಷಮೆಯಾಚಿಸಲಿ’: ಜೆ.ಎಂ.ಕೊರಬು

​ಪ್ರಜಾವಾಣಿ ವಾರ್ತೆ
Published 25 ಮೇ 2025, 12:39 IST
Last Updated 25 ಮೇ 2025, 12:39 IST
ಜೆ.ಎಂ.ಕೊರಬು
ಜೆ.ಎಂ.ಕೊರಬು   

ಅಫಜಲಪುರ: ‘ಸಚಿವ ಪ್ರಿಯಾಂಕ್‌ ಖರ್ಗೆ ಕುರಿತು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನಿಂದಿಸಿದ್ದು ಖಂಡನೀಯ. ಕೂಡಲೇ ಅವರು ಕ್ಷಮೆಯಾಚಿಸಬೇಕು’ ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಜೆ.ಎಂ.ಕೊರಬು ಒತ್ತಾಯಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ನಾರಾಯಣಸ್ವಾಮಿಗೆ ಚಿತ್ತಾಪುರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಘೇರಾವ್ ಹಾಕಿ, ಹೇಳಿಕೆ ಹಿಂಪಡೆದು ಕ್ಷಮೆಯಾಚಿಸುವಂತೆ ಒತ್ತಾಯಿಸಿರುವುದರಲ್ಲಿ ತಪ್ಪಿಲ್ಲ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT