ADVERTISEMENT

ಲಂಬಾಣಿ ಸಮಾಜದಿಂದ ಪತ್ರ ಚಳುವಳಿ

​ಪ್ರಜಾವಾಣಿ ವಾರ್ತೆ
Published 11 ಜೂನ್ 2020, 3:40 IST
Last Updated 11 ಜೂನ್ 2020, 3:40 IST
ಶಹಾಬಾದ್ ನಗರದಲ್ಲಿ ಲಂಬಾಣಿ ಸಮಾಜದ ಮುಖಂಡರು ಪತ್ರಗಳನ್ನು ಅಂಚೆ ಪೆಟ್ಟಿಗೆಗೆ ಹಾಕಿದರು
ಶಹಾಬಾದ್ ನಗರದಲ್ಲಿ ಲಂಬಾಣಿ ಸಮಾಜದ ಮುಖಂಡರು ಪತ್ರಗಳನ್ನು ಅಂಚೆ ಪೆಟ್ಟಿಗೆಗೆ ಹಾಕಿದರು   

ಶಹಾಬಾದ್: ಲಂಬಾಣಿ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವ ಪ್ರಸ್ತಾವವನ್ನು ತಿರಸ್ಕರಿಸಬೇಕು ಎಂದು ಆಗ್ರಹಿಸಿ ಬುಧವಾರ ನಗರದಲ್ಲಿ ಮುಖಂಡ ರವಿ ರಾಠೋಡ ನೇತೃತ್ವದಲ್ಲಿಲಂಬಾಣಿ ಸಮಾಜದ ಮುಖಂಡರು ಪತ್ರ ಚಳುವಳಿಯ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

‘ಲಂಬಾಣಿ ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿಲ್ಲ. ಆದರೆ ಲಂಬಾಣಿ ಸಮಾಜವನ್ನು ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ಹೊರಗಿಡುವಂತೆ ಕೆಲವು ಪ್ರಭಾವಿಗಳು ಪ್ರಯತ್ನ ಮಾಡುತ್ತಿದ್ದಾರೆ. ಸಮಾಜದ ಬಗ್ಗೆ ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ಲಂಬಾಣಿ ಸಮಾಜವನ್ನು ಕೈಬಿಡಬಾರದು’ ಎಂದು ಪತ್ರದ ಮೂಲಕ ಆಗ್ರಹಿಸಿದರು.

ಮುಖಂಡರಾದ ಕುಮಾರ ಚವ್ಹಾಣ, ದೇವರಾಜ ರಾಠೋಡ,ದಿಲೀಪ್ ನಾಯಕ, ಚಂದರ ನಾಯಕ, ಸುನೀಲ ಚವ್ಹಾಣ, ಭರತ್ ,ವಿಜಯ ರಾಠೋಡ,ಚಂದು ಜಾಧವ, ಹನುಮಂತ ಪವಾರ, ಪ್ರವೀಣ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.