ADVERTISEMENT

ಖರ್ಗೆಗೆ ಕೊಲೆ ಬೆದರಿಕೆ: ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 11 ಜೂನ್ 2020, 3:39 IST
Last Updated 11 ಜೂನ್ 2020, 3:39 IST
ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊಲೆ ಬೆದರಿಕೆ ಕರೆ ವಿರೋಧಿಸಿ ಚಿಂಚೋಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊಲೆ ಬೆದರಿಕೆ ಕರೆ ವಿರೋಧಿಸಿ ಚಿಂಚೋಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು   

ಚಿಂಚೋಳಿ: ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕರೆ ಮಾಡಿ ಕೊಲೆ ಬೆದರಿಕೆ ಹಾಕಿರುವುದು ಆಘಾತಕಾರಿ ಬೆಳವಣಿಗೆಯಾಗಿದೆ. ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಜರುಗಿಸಬೇಕು ಎಂದು ಕಾಂಗ್ರೆಸ್ ಮುಖಂಡ ಸುಭಾಷ ರಾಠೋಡ್ ಬುಧವಾರ ಇಲ್ಲಿ ಒತ್ತಾಯಿಸಿದರು.

ಕೊಲೆ ಬೆದರಿಕೆಯನ್ನು ಖಂಡಿಸಿ ದಿಢೀರ್ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅನಿಲಕುಮಾರ ಜಮಾದಾರ, ಚಂದ್ರಾಸಿಂಗ್, ಶಿವಕುಮಾರ, ಗೋಪಾಲರಾವ್, ಮಹೇಮೂದ್ ಪಟೇಲ್ , ರಾಮಶೆಟ್ಟಿ ಪವಾರ್, ಆರ್. ಗಣಪತರಾವ್, ಕೆ.ಎಂ ಬಾರಿ, ಅಬ್ದುಲ ಬಾಷೀತ್ ಮಾತನಾಡಿದರು.

ADVERTISEMENT

ಡಾ.ತುಕಾರಾಮ ಪವಾರ, ಸಂತೋಷ ಗುತ್ತೇದಾರ, ಅಮರ ಲೊಡ್ಡನೋರ್, ಖಲೀಲ್ ಪಟೇಲ್, ರಾಧಾಕೃಷ್ಣ, ವಿಜಯಕುಮಾರ ಗಂಗನಪಳ್ಳಿ ಇದ್ದರು. ಇದಕ್ಕೂ ಮೊದಲು ಪಟ್ಟಣದಲ್ಲಿ ಸಭೆ ಸೇರಿದ ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ ಶಿವಕುಮಾರ
ಪದಗ್ರಹಣ ಕಾರ್ಯಕ್ರಮಕ್ಕೆ ತಾಲ್ಲೂಕಿನಿಂದ ಪಾಲ್ಗೊಳ್ಳುವ ಕುರಿತು ಚರ್ಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.