ADVERTISEMENT

ಬಿಜೆಪಿ ಭ್ರಷ್ಟಾಚಾರದ ಹಗರಣಗಳ ತನಿಖೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 18 ಮೇ 2022, 14:23 IST
Last Updated 18 ಮೇ 2022, 14:23 IST
ಲಿಂಗರಾಜ ತಾರಫೈಲ್
ಲಿಂಗರಾಜ ತಾರಫೈಲ್   

ಕಲಬುರಗಿ: ಬಿಜೆಪಿ ಸರ್ಕಾರವು ನಿರಂತರವಾಗಿ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಶೇ 40ರಷ್ಟು ಕಮಿಷನ್ ಕೊಡಬೇಕಾಗಿದೆ ಎಂದು ಗುತ್ತಿಗೆದಾರರು ಆರೋಪಿಸಿದ್ದಾರೆ. ಇತ್ತೀಚೆಗೆ ಲಂಚ ಪಡೆಯುವಾಗ ವಿಡಿಯೊದಲ್ಲಿ ಸಿಕ್ಕಿಬಿದ್ದ ಲೋಕೋಪಯೋಗಿ ಇಲಾಖೆಯ ಕಿರಿಯ ಎಂಜಿನಿಯರ್ ವೆಂಕಟ್ ಬಿರಾದಾರ ವಿರುದ್ಧವೂ ಯಾವುದೇ ಕ್ರಮ ಜರುಗಿಸಿಲ್ಲ. ಈ ಎಲ್ಲ ಪ್ರಕರಣಗಳ ಸಮಗ್ರ ತನಿಖೆ ನಡೆಸಬೇಕು ಎಂದು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲಿಂಗರಾಜ ತಾರಫೈಲ್ ಒತ್ತಾಯಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಲಬುರಗಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ರಾಜು ಚವ್ಹಾಣ ಎಂಬುವವರು ಶೌಚಾಲಯ ಹಾಗೂ ಮನೆ ನಿರ್ಮಾಣ ಕಾಮಗಾರಿ ಗುತ್ತಿಗೆ ಹಿಡಿದಿದ್ದು, ಶೇ 40ರಷ್ಟು ಕಮಿಷನ್ ಕೊಡುವುದು ಆಗುವುದಿಲ್ಲ ಎಂದು ಹೇಳಿ ವಿಷ ಸೇವಿಸಿದ್ದಾರೆ. ಈ ಬಗ್ಗೆಯೂ ತನಿಖೆ ಆಗಿಲ್ಲ. ಒಂದು ಕೊಳವೆಬಾವಿಗೆ ಬೇರೆ ಇಲಾಖೆಯಲ್ಲಿ ₹ 90 ಸಾವಿರ ವೆಚ್ಚವಾದರೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ₹ 1.80 ಲಕ್ಷ ಬಿಲ್ ಎತ್ತಲಾಗುತ್ತಿದೆ. ಈ ಹಗಲು ದರೋಡೆಯ ಬಗ್ಗೆ ಯಾರೂ ಚಕಾರವೆತ್ತುತ್ತಿಲ್ಲ’ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT