ಕಲಬುರಗಿ: ಮಹಾಶಿವರಾತ್ರಿ ಅಂಗವಾಗಿ ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗ ಮಹಾಪೂಜೆಗೆ ಆಂದೋಲಾದ ಕರುಣೇಶ್ವರ ಮಠದ ಸಿದ್ದಲಿಂಗ ಸ್ವಾಮೀಜಿ ಅನುಮತಿ ಕೋರಿ ಮನವಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅನುಕೂಲವಾಗುವಂತೆ ಫೆ.25ರ ರಾತ್ರಿ 11 ಗಂಟೆಯಿಂದ ಫೆ.27ರ ಬೆಳಗಿನ 6 ಗಂಟೆಯವರೆಗೆ ಆಳಂದ ತಾಲ್ಲೂಕಿನಾದ್ಯಂತ ಎಲ್ಲಾ ಬಗೆಯ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಈ ಅವಧಿಯಲ್ಲಿ ಬಾರ್ ಮತ್ತು ರೆಸ್ಟೋರೆಂಟ್‍ಗಳನ್ನೂ ಮುಚ್ಚುವಂತೆ ಆದೇಶದಲ್ಲಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.