ADVERTISEMENT

ಕಲಬುರ್ಗಿಯಲ್ಲಿ 27ರವರೆಗೆ ಲಾಕ್‌ಡೌನ್‌ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 19 ಜುಲೈ 2020, 15:59 IST
Last Updated 19 ಜುಲೈ 2020, 15:59 IST
   

ಕಲಬುರ್ಗಿ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಶರತ್ ಬಿ. ಅವರು ಇದೇ 20ರವರೆಗೆ ಜಾರಿಯಲ್ಲಿದ್ದ ಲಾಕ್‌ಡೌನ್‌ ಅನ್ನು ಜುಲೈ 27ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.

ಕಲಬುರ್ಗಿ ನಗರ ಹಾಗೂ ತಾಲ್ಲೂಕುಗಳ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಲಾಕ್‌ಡೌನ್‌ ಜಾರಿಯಲ್ಲಿರಲಿದೆ. ಭಾನುವಾರ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್‌ಡೌನ್‌ ಇರುತ್ತದೆ. ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 6ರಿಂದ ಮಧ್ಯಾಹ್ನ 2ರವರೆಗೆ ಅನುಮತಿಸಲಾದ ವಹಿವಾಟು ನಡೆಸಲು ಅವಕಾಶವಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಆಸ್ಪತ್ರೆ ಹಾಗೂ ಔಷಧಿ ಅಂಗಡಿಗಳಿಗೆ ಈ ಲಾಕ್‌ಡೌನ್ ಆದೇಶ ಅನ್ವಯವಾಗುವುದಿಲ್ಲ ಎಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.