ಕರ್ನಾಟಕ ಲೋಕಾಯುಕ್ತ
– ಪ್ರಜಾವಾಣಿ ಚಿತ್ರ
ಕಲಬುರಗಿ: ನಗರದ ವಿವಿಧ ಇಲಾಖೆಗಳ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳಿಂದ ಮಂಗಳವಾರವೂ ದಿಢೀರ್ ದಾಳಿ ನಡೆಸಿ, ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಸಮಾಜ ಕಲ್ಯಾಣ ಇಲಾಖೆಯ ಕಟ್ಟಡದಲ್ಲಿ ಜಂಟಿ ನಿರ್ದೇಶಕರ ಕಚೇರಿ ಹಾಗೂ ಕಲಬುರಗಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿಗಳ ವಿವಿಧ ವಿಭಾಗಗಳಿಗೆ ಭೇಟಿ ನೀಡಿ, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ಮಾತ್ರವಲ್ಲದೇ ಕೃಷಿ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಹಾಗೂ ಸಾರಿಗೆ ಇಲಾಖೆಯ ಕಚೇರಿಗಳಿಗೆ ಲೋಕಾಯುಕ್ತ ಬೆಂಗಳೂರಿನ ಅಧಿಕಾರಿಗಳ ವಿವಿಧ ತಂಡಗಳು ದಿಢೀರ್ ಭೇಟಿ ಕೊಟ್ಟು ದಾಖಲೆ ಪತ್ರಗಳು, ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದ ಕಡತಗಳನ್ನು ಪರಿಶೀಲಿಸಿದರು.
ಕಲಬುರಗಿಯಲ್ಲದೇ ಚಿಂಚೋಳಿ, ಕಾಳಗಿ ತಾಲ್ಲೂಕಿನಲ್ಲೂ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ದಿಢೀರ್ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.