ADVERTISEMENT

ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹ

ರಾಘವೇಂದ್ರ ಹುಣಸೂರಗೆ ಜೀವ ಬೆದರಿಕೆ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2020, 3:39 IST
Last Updated 18 ಸೆಪ್ಟೆಂಬರ್ 2020, 3:39 IST

ಜೇವರ್ಗಿ: ಝೀ ಕನ್ನಡ ವಾಹಿನಿಯ ಬಿಸಿನೆಸ್ ಹೆಡ್ ರಾಘವೇಂದ್ರ ಹುಣಸೂರ ಅವರಿಗೆ ಜೀವ ಬೆದರಿಕೆ ಒಡ್ಡಿದ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ತಾಲ್ಲೂಕು ದಲಿತ ಸಂಘಟನೆಗಳ ಸಮನ್ವಯ ಸಮಿತಿ ಮುಖಂಡ ಚಂದ್ರಶೇಖರ ಹರನಾಳ ರಾಜ್ಯ ಸರ್ಕಾರವನ್ನು ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

ಝೀ ಕನ್ನಡ ವಾಹಿನಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಜೀವನಾಧಾರಿತ ‘ಮಹಾನಾಯಕ’ ಧಾರಾವಾಹಿಯ ಪ್ರಸಾರವನ್ನು ಸ್ಥಗಿತಗೊಳಿಸುವಂತೆ ಕೆಲವು ಕಿಡಿಗೇಡಿಗಳ ರಾಘವೇಂದ್ರ ಹುಣಸೂರ ಅವರಿಗೆ ದೂರವಾಣಿ ಕರೆ ಮಾಡಿ ಪ್ರಾಣ ಬೆದರಿಕೆ ಒಡ್ಡುತ್ತಿರುವುದು ಖಂಡನೀಯ ಎಂದರು.

ಪ್ರತಿ ಶನಿವಾರ ಮತ್ತು ಭಾನುವಾರದಂದು ಸಂಜೆ 6ರಿಂದ 7ರವರೆಗೆ ಮಹಾನಾಯಕ ಧಾರವಾಹಿ ವೀಕ್ಷಿಸಲು ಡಾ.ಅಂಬೇಡ್ಕರ್ ಭವನದಲ್ಲಿ ಎಲ್‌ಇಡಿ ಪರದೆ ವ್ಯವಸ್ಥೆ ಕಲ್ಪಿಸಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಧಾರವಾಹಿ ವೀಕ್ಷಿಸಬೇಕು ಎಂದು ಅವರು ಹೇಳಿದರು.

ADVERTISEMENT

ದೌಲಪ್ಪ ಮದನ್, ಮಲ್ಲಿಕಾರ್ಜುನ ಕೆಲ್ಲೂರ, ಸಿದ್ರಾಮ ಕಟ್ಟಿ, ಸಿದ್ದಪ್ಪ ಆಲೂರ, ಭಾಗಣ್ಣ ಸಿದ್ನಾಳ, ರವಿ ಕುಳಗೇರಿ, ಶ್ರೀಹರಿ ಕರಕಿಹಳ್ಳಿ, ದೇವಿಂದ್ರ ವರ್ಮಾ, ಶ್ರೀಮಂತ ಧನಕರ್, ರಾಜಶೇಖರ ಶಿಲ್ಪಿ, ಸಂಗಣ್ಣ ಕಟ್ಟಿಸಂಗಾವಿ, ಮಲ್ಲು ಮಾರಡಗಿ, ಸಂಗಣ್ಣ ದೊಡ್ಡಮನಿ ಗುಡೂರ, ಭೀಮರಾಯ ಬಳಬಟ್ಟಿ, ಬಸವರಾಜ ಹೆಗಡೆ, ಶಿವಕುಮಾರ ಹೆಗಡೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.