ಅಫಜಲಪುರ: ತಾಲ್ಲೂಕಿನ ದೇವಲ ಗಾಣಗಾಪುರ ಸಮೀಪ ಭೀಮಾನದಿಯಲ್ಲಿ ಗುರುವಾರ ಸ್ನಾನಕ್ಕೆ ತೆರಳಿದ್ದ ಮಹಾರಾಷ್ಟ್ರ ಮೂಲದ ಮಹಿಳೆ ಶೈಲಿ ಗೋಡೆ ಎಂಬುವವರು ನದಿಯಲ್ಲಿ ಮುಳುಗಿದ್ದು, ನಾಪತ್ತೆಯಾಗಿದ್ದಾರೆ. ಅವರ ಪತ್ತೆಗಾಗಿ ಅಗ್ನಿಶಾಮಕ ದಳದವರು ಬೆಳಗ್ಗೆಯಿಂದ ರಾತ್ರಿಯವರೆಗೂ ಕಾರ್ಯಾಚರಣೆ ಮುಂದುವರಿಸಿದ್ದರು ಎಂದು ತಿಳಿದುಬಂದಿದೆ.
ಮಹಾರಾಷ್ಟ್ರದ ಪುಣೆ ಜಿಲ್ಲೆಯ ದೌಂಡ್ ತಾಲ್ಲೂಕಿನ ವಂಡಅಡವಿ ಗ್ರಾಮದ ಶೈಲಿ ಅವರು ದತ್ತ ಮಹಾರಾಜರ ದರ್ಶನಕ್ಕಾಗಿ ಅವರ ಪತಿ ವಿಲಾಸ್ ಗೋಡೆ ಮತ್ತು ಕುಟುಂಬದ ಜೊತೆ ದೇವಲಗಾಣಗಾಪುರಕ್ಕೆ ಬಂದಿದ್ದರು.
ಬೆಳಿಗ್ಗೆ ಭೀಮಾನದಿಯ ಚಕ್ರೇಶ್ವರ ತೀರ್ಥದಲ್ಲಿ ಸ್ನಾನ ಮಾಡುವಾಗ ಕಾಲು ಜಾರಿ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.