ADVERTISEMENT

‘ಗಾಂಧೀಜಿ ಅಹಿಂಸಾ ತತ್ವ ಅಳವಡಿಸಿಕೊಳ್ಳಿ’

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2019, 9:08 IST
Last Updated 27 ಸೆಪ್ಟೆಂಬರ್ 2019, 9:08 IST
ಮಹಾತ್ಮ ಗಾಂಧೀಜಿಯವರ ಜಯಂತ್ಯುತ್ಸವದಲ್ಲಿ ಕಲಾವಿದರು ಸ್ವಚ್ಛ ಭಾರತ ಅಭಿಯಾನದ ರೂಪಕವನ್ನು ಪ್ರದರ್ಶಿಸಿದರು 
ಮಹಾತ್ಮ ಗಾಂಧೀಜಿಯವರ ಜಯಂತ್ಯುತ್ಸವದಲ್ಲಿ ಕಲಾವಿದರು ಸ್ವಚ್ಛ ಭಾರತ ಅಭಿಯಾನದ ರೂಪಕವನ್ನು ಪ್ರದರ್ಶಿಸಿದರು    

ಕಲಬುರ್ಗಿ: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮ ಗಾಂಧೀಜಿ ಅವರ ಅಹಿಂಸಾ ತತ್ವಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಹೇಳಿದರು.

ಗುರುವಾರ ನಗರದ ಶರಣಬಸವ ವಿಶ್ವವಿದ್ಯಾಲಯದಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ, ಕಲಬುರ್ಗಿ–ಬಳ್ಳಾರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ (ಗ್ರಾಮೀಣ) ಹಾಗೂ ಶರಣಬಸವೇಶ್ವರ ಶಿಕ್ಷಣ ಸಂಸ್ಥೆ ಆಶ್ರಯದಲ್ಲಿ ಮಹಾತ್ಮ ಗಾಂಧೀಜಿಯವರ 150ನೇ ಜಯಂತ್ಯುತ್ಸವ ಮತ್ತು ಛಾಯಾಚಿತ್ರ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಗಾಂಧೀಜಿ ಅವರು ಚಿಕ್ಕ ವಯಸ್ಸಿನಲ್ಲಿ ಕೆಲ ತಪ್ಪು ಮಾಡಿ ತಿದ್ದಿಕೊಂಡು ಸ್ವಾತಂತ್ರ್ಯಕ್ಕಾಗಿ ಹೋರಾಡುವ ಮೂಲಕ ಮಹಾನ್ ವ್ಯಕ್ತಿ ಎನಿಸಿಕೊಂಡರು. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ಗಾಂಧಿಜೀಯವರ ಜೀವನ ಚರಿತ್ರೆ ತಿಳಿದುಕೊಂಡು ಅವರ ನಡೆ–ನುಡಿ, ಆದರ್ಶ–ತತ್ವಗಳನ್ನು ಬೆಳೆಸಿಕೊಳ್ಳಿ ಎಂದರು.

ADVERTISEMENT

ಗೋದುತಾಯಿ ದೊಡ್ಡಪ್ಪ ಅಪ್ಪಾ ಕಲಾ ಮತ್ತು ವಾಣಿಜ್ಯ ಮಹಿಳಾ ಕಾಲೇಜು ಪ್ರಾಚಾರ್ಯರಾದ ಡಾ. ನೀಲಾಂಬಿಕಾ ಪೊಲೀಸ್ ಪಾಟೀಲ ಮಾತನಾಡಿದರು.

ಕಲಬುರ್ಗಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಶಿವರಾಜ ಕಲ್ಲಪ್ಪ ಸಜ್ಜನ್, ಶರಣಬಸವೇಶ್ವರ ಕಲಾ ಕಾಲೇಜಿನ ಸಹ ಪ್ರಾಚಾರ್ಯ ಡಾ. ಸುರೇಶಕುಮಾರ ನಂದಗಾಂವ ಉಪನ್ಯಾಸ ನೀಡಿದರು.

ಕಲಬುರ್ಗಿ–ಬಳ್ಳಾರಿ ಕ್ಷೇತ್ರ ಜನಸಂಪರ್ಕ ಕಾರ್ಯಾಲಯದ ಉಪನಿರ್ದೇಶಕ ಡಾ.ಜಿ.ಡಿ.ಹಳ್ಳಿಕೇರಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾತಂತ್ರ ಹೋರಾಟಗಾರರನ್ನು ಯಾವಾಗಲೂ ಸ್ಮರಿಸುತ್ತಾ, ಅವರ ಹೋರಾಟದ ಫಲವಾಗಿ ನಾವು ಇಂದು ಸಂತೋಷವಾಗಿ ಇರಲು ಸಾಧ್ಯವಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಮಾಲಾಜಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಜಿ.ಬಿ.ಸಿದ್ದೇಶ್ವರಪ್ಪ, ಶರಣ ಬಸವೇಶ್ವರ ಬಿ.ಇಡಿ ಕಾಲೇಜಿನ ಉಪನ್ಯಾಸಕಿ ಗೀತಾ ಇದ್ದರು.

ಸ್ವಾತಂತ್ರ್ಯ ಹೋರಾಟಗಾರ ಧರ್ಮವೀರ ಮಾಣಿಕರಾವ್ ಗಂಪಾ ಮತ್ತು ಶ್ಯಾಮರಾವ ಕುಲಕರ್ಣಿ ಅವರನ್ನು ಸನ್ಮಾನಿಸಲಾಯಿತು. ಲೋಹಿಯಾ ಕಲಾತಂಡ ಅಷ್ಟಗಿ ಹಾಗೂ ರೇವಣಸಿದ್ದೇಶ್ವರ ಕಲಾ ತಂಡಗಳು ಸ್ವಚ್ಛ ಭಾರತ ಕುರಿತು ಬೀದಿನಾಟಕ, ಹಾಡು, ಡೊಳ್ಳು ಕುಣಿತ ಪ್ರದರ್ಶನ ನೀಡಿದರು.

ಭಾಷಣ, ಚಿತ್ರಕಲಾ, ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಕಾರ್ಯಕ್ರಮವನ್ನು ರೇಣುಕಮ್ಮ ವಾರದ ನಿರೂಪಿಸಿದರು. ಬೆಂಗಳೂರಿನ ಪಿಐಬಿಯ ಮಾಧ್ಯಮ ಮತ್ತು ಸಂವಹನ ಅಧಿಕಾರಿ ಪಿ.ಜಿ ಪಾಟೀಲ ಸ್ವಾಗತಿಸಿದರು. ಎನ್.ರಾಮಕೃಷ್ಣ ವಂದಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.