ADVERTISEMENT

ಬಾಲಕಿ ಅತ್ಯಾಚಾರಿಗೆ 20 ವರ್ಷ ಜೈಲು ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2022, 4:49 IST
Last Updated 15 ಅಕ್ಟೋಬರ್ 2022, 4:49 IST

ಕಲಬುರಗಿ: ಚಿಂಚೋಳಿ ತಾಲ್ಲೂಕಿನ ಗ್ರಾಮವೊಂದರ ಹೊಲದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾಗಿದ್ದರಿಂದ ರವಿ ಸುಭಾಷ್ ಎಂಬಾತನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ಪೋಕ್ಸೊ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ ₹ 20 ಸಾವಿರ ದಂಡ ವಿಧಿಸಿದೆ.

2021ರ ಜುಲೈ 21ರಂದು ರವಿ ಹೊಲದಲ್ಲಿದ್ದ ಬಾಲಕಿಯನ್ನು ಎಳೆದೊಯ್ದು ಬಾಯಿ ಮುಚ್ಚಿ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಬಾಲಕಿಯ ತಾಯಿ ನೀಡಿದ ದೂರನ್ನು ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದ ಚಿಂಚೋಳಿ ಸಿಪಿಐ ಮಹಾಂತೇಶ ಬಿ. ಪಾಟೀಲ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯದ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು, ಪೋಕ್ಸೊ ಕಾಯ್ದೆಯಡಿ 20 ವರ್ಷ ಜೈಲು ಶಿಕ್ಷೆ, ₹ 20 ಸಾವಿರ ದಂಡ, ಐಪಿಸಿ ಸೆಕ್ಷನ್ 341ರಡಿ 15 ದಿನ ಸಾದಾ ಜೈಲು ಶಿಕ್ಷೆ ಹಾಗೂ ₹ 200 ದಂಡ ವಿಧಿಸಿದ್ದಾರೆ.

ADVERTISEMENT

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ. ತುಪ್ಪದ ವಾದ ಮಂಡಿಸಿದ್ದರು.

ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ನೊಂದ ಬಾಲಕಿಗೆ ₹ 5 ಲಕ್ಷ ಪರಿಹಾರವನ್ನು ತೀರ್ಪು ಪ್ರಕಟವಾದ ಒಂದು ತಿಂಗಳ ಒಳಗಾಗಿ ನೀಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.