ಕಲಬುರಗಿ: ಚಲಿಸುತ್ತಿದ್ದ ರೈಲಿನಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಚಿತ್ತಾಪುರ–ಸುಲಹಳ್ಳಿ ನಿಲ್ದಾಣಗಳ ನಡುವಿನ ರೈಲ್ವೆ ಹಳಿ ಮಧ್ಯೆ ಸುಮಾರು 38 ವರ್ಷದ ವ್ಯಕ್ತಿಯೊಬ್ಬರು ಬಿದ್ದಿದ್ದರು. ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಅವರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.