
ಸಾವು
(ಪ್ರಾತಿನಿಧಿಕ ಚಿತ್ರ)
ಕಲಬುರಗಿ: ಕುಡಿದ ಮತ್ತಿನಲ್ಲಿ ದುಡ್ಡಿನ ವಿಚಾರವಾಗಿ ನಡೆದ ಗಲಾಟೆಯಲ್ಲಿ ದುಷ್ಕರ್ಮಿಗಳು ವ್ಯಕ್ತಿಯೊಬ್ಬನಿಗೆ ಎದೆಗೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ್ದಾರೆ. ನಗರದ ಸೂಪರ್ ಮಾರ್ಕೆಟ್ ಪ್ರದೇಶದ ಜಾಗದಲ್ಲಿ ಶುಕ್ರವಾರ ಸಂಜೆ ಈ ಅವಘಡ ನಡೆದಿದೆ.
ನಗರದ ಗಾಜಿಪುರ ಬಡಾವಣೆ ನಿವಾಸಿ ಶರಣಬಸಪ್ಪ ಗೌಳಿ (35) ಕೊಲೆಯಾದವರು. ಶರಣಬಸಪ್ಪ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.
ಶುಕ್ರವಾರ ಸಂಜೆ 6 ಗಂಟೆ ಸುಮಾರಿಗೆ ಸೂಪರ್ ಮಾರ್ಕೆಟ್ ನರ್ತಕಿ ಬಾರ್‌ನ ಪಾರ್ಕಿಂಗ್‌ನಲ್ಲಿ ಯಾರೋ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಮೂಲಗಳು ಹೇಳಿವೆ.
‘ಎದೆಗೆ ಚಾಕು ಚುಚ್ಚಿದ್ದರಿಂದ ಶರಣಬಸಪ್ಪ ಗೌಳಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ನಗರ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ., ಎಸಿಪಿ ಶಿವನಗೌಡ ಪಾಟೀಲ, ಬ್ರಹ್ಮಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.