ADVERTISEMENT

ದಕ್ಷ ಪೊಲೀಸ್ ಅಧಿಕಾರಿ ವಿರುದ್ಧ ಮಣಿಕಂಠ ಸುಳ್ಳು ಆರೋಪ: ಮಲ್ಲಪ್ಪ ಹೊಸಮನಿ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2024, 14:03 IST
Last Updated 9 ಅಕ್ಟೋಬರ್ 2024, 14:03 IST
<div class="paragraphs"><p>ಮಲ್ಲಪ್ಪ ಹೊಸಮನಿ</p></div>

ಮಲ್ಲಪ್ಪ ಹೊಸಮನಿ

   

ಚಿತ್ತಾಪುರ: ಪ್ರಾಮಾಣಿಕವಾಗಿ ಮತ್ತು ದಕ್ಷತೆಯಿಂದ ಜನಪರವಾಗಿ ಕೆಲಸ ಮಾಡುತ್ತಿರುವ ಶಹಾಬಾದ್ ಪಿಐ ನಟರಾಜ ಲಾಡೆ ಅವರ ವಿರುದ್ಧ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಅವರು ಸುಳ್ಳು ಆರೋಪ ಮಾಡಿದ್ದಾರೆ ಎಂದು ಭಾರತೀಯ ದಲಿತ ಪ್ಯಾಂಥರ್ ರಾಜ್ಯಾಧ್ಯಕ್ಷ ಮಲ್ಲಪ್ಪ ಹೊಸಮನಿ ಅವರು ಆರೋಪಿಸಿದರು.

ಬುಧವಾರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ದಕ್ಷ ಅಧಿಕಾರಿಗಳಿಗೆ ಕಿರುಕುಳ ನೀಡಿ, ಬ್ಲ್ಯಾಕ್ ಮೇಲ್ ಮಾಡುವ ಕೆಲಸ ಮಣಿಕಂಠ ಮಾಡುತ್ತಿದ್ದಾರೆ. ಲಾಡೆ ಅವರು ಇದುವರೆಗೆ ಅವರ ಹುದ್ದೆಗೆ ಮತ್ತು ಕರ್ತವ್ಯಕ್ಕೆ ಚ್ಯುತಿ ಬಾರದಂತೆ, ಇಲಾಖೆಗೆ ಕೆಟ್ಟ ಹೆಸರು ಬರುವಂತ ಕೆಲಸ ಮಾಡಿಲ್ಲ. ಅವರ ವ್ಯಕ್ತಿತ್ವಕ್ಕೆ ಕಪ್ಪು ಚುಕ್ಕೆ ತಾಗದಂತೆ ವೃತ್ತಿಜೀವನ ನಡೆಸುತ್ತಿದ್ದಾರೆ. ಆದರೆ, ಅಧಿಕಾರಿಯ ವಿರುದ್ಧ ಸುಳ್ಳು ಆಪಾದನೆ ಮಾಡುವ ಮೂಲಕ ಆಡಳಿತ ವಲಯದಲ್ಲಿ ಅಧಿಕಾರಿಗಳ ಮನೋಸ್ಥೈರ್ಯಕ್ಕೆ ಧಕ್ಕೆಯುಂಟು ಮಾಡುತ್ತಿದ್ದಾರೆ ಎಂದು ಅವರು ದೂರಿದರು.

ADVERTISEMENT

ಮಣಿಕಂಠ ಅವರು ಸಾಮಾಜಿಕ ವಲಯದಲ್ಲಿ ಮತ್ತು ಆಡಳಿತ ವಲಯದಲ್ಲಿ ಕಲುಷಿತ ವಾತಾವರಣ ಸೃಷ್ಟಿಸುತ್ತಿದ್ದಾರೆ. ಅಧಿಕಾರಿಗಳಿಗೆ ಭಯ ಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆಯೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ವಿರುದ್ಧವೂ ಸುಳ್ಳು ಆರೋಪ ಮಾಡಿದ ಉದಾಹರಣೆಗಳಿವೆ. ಜನರು ಮಣಿಕಂಠ ಅವರ ಅರೋಪವನ್ನು ನಂಬುವುದಿಲ್ಲ. ದಕ್ಷ ಪೊಲೀಸ್ ಅಧಿಕಾರಿ ಶಹಾಬಾದ್ ಪಿಐ ನಟರಾಜ ಅವರ ವಿರುದ್ಧ ಸುಳ್ಳು ಆರೋಪ ಮಾಡಿರುವ ಮಣಿಕಂಠ ರಾಠೋಡ ಅವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೊಸಮನಿ ಅವರು ಒತ್ತಾಯಿಸಿದರು.

ಮಿಲಿಂದ ಸನಗುಂದಿ, ರಮೇಶ ಚಿಮ್ಮಾಇದಲಾಯಿ, ಕಲ್ಯಾಣರಾವ ಡೊಣ್ಣೂರ, ಬಸವರಾಜ ಹಾಳಕಾಯಿ ಅವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.