ADVERTISEMENT

ಜಿಮ್ಸ್ ವಿದ್ಯಾರ್ಥಿಗಳಿಂದ ಮ್ಯಾರಥಾನ್

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2022, 2:58 IST
Last Updated 13 ಆಗಸ್ಟ್ 2022, 2:58 IST
ಕಲಬುರಗಿಯ ಜಿಮ್ಸ್ ವೈದ್ಯಕೀಯ ಕಾಲೇಜಿನಿಂದ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿವರೆಗೆ ಮ್ಯಾರಥಾನ್ ನಡೆಸಿದರು
ಕಲಬುರಗಿಯ ಜಿಮ್ಸ್ ವೈದ್ಯಕೀಯ ಕಾಲೇಜಿನಿಂದ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿವರೆಗೆ ಮ್ಯಾರಥಾನ್ ನಡೆಸಿದರು   

ಕಲಬುರಗಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಸ್ಟೇಟ್ ಬ್ಯಾಂಕ್ ಇಂಡಿಯಾ ಸಹಯೋಗದೊಂದಿಗೆ ಗುರುವಾರ ಜಿಮ್ಸ್ ಆಸ್ಪತ್ರೆಯಿಂದ ಮಿನಿ ವಿಧಾನಸೌಧದವರೆಗೆ ಮ್ಯಾರಾಥಾನ್ ನಡೆಯಿತು. 500 ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಉತ್ಸಾಹದಿಂದ ಭಾಗವಹಿಸಿದ್ದರು.

ಸ್ವಾತಂತ್ರ್ಯ ಹೋರಾಟದ ಇತಿಹಾಸ ಇಂದಿನ ಯುವ ಪೀಳಿಗೆಗೆ ಪರಿಚಯಿಸಲು ಮತ್ತು ಫಿಟ್ ಇಂಡಿಯಾ, ಫ್ರೀಡಂ ರನ್ ಘೋಷವಾಕ್ಯದೊಂದಿಗೆ ಉತ್ತಮ ಆರೋಗ್ಯಕ್ಕಾಗಿ ಈ ಓಟ ಆಯೋಜಿಸಲಾಗಿತ್ತು. ಜಿಮ್ಸ್‌ನಿಂದ ಅರಂಭವಾದ ಓಟವು ಅನ್ನಪೂರ್ಣ ಕ್ರಾಸ್, ಎಸ್.ವಿ.ಪಿ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೊನೆಗೊಂಡಿತು.

ಜಿಮ್ಸ್ ಜನರಲ್ ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ. ಜಿ.ಬಿ.ದೊಡ್ಡಮನಿ, ‘ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಸಂಸ್ಥೆಯು ಕ್ರೀಡೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಿರಂತರವಾಗಿ ಆಯೋಜಿಸುತ್ತಿದೆ’ ಎಂದರು.

ADVERTISEMENT

ಜಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ. ಎಂ.ಡಿ.ಶಫಿಯೂದ್ದೀನ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಅಂಬಾರಾಯ ರುದ್ರವಾಡಿ, ಡಾ. ಫರಖಾನಾ ಖುಷ್ನೂದ್ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.