ADVERTISEMENT

ಸ್ವಚ್ಛ ಕಲಬುರಗಿಗಾಗಿ ಮ್ಯಾರಥಾನ್‌

ಪುರುಷರಿಗೆ 6.5 ಕಿ.ಮೀ. ಮಹಿಳೆಯರಿಗೆ 5.5 ಕಿ.ಮೀ. ಓಟದ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2021, 7:59 IST
Last Updated 2 ನವೆಂಬರ್ 2021, 7:59 IST
ಕಲಬುರಗಿ ಮಹಾನಗರ ಪಾಲಿಕೆ ಆಯೋಜಿಸಿದ್ದ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಸ್ಪರ್ಧಿಗಳು
ಕಲಬುರಗಿ ಮಹಾನಗರ ಪಾಲಿಕೆ ಆಯೋಜಿಸಿದ್ದ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಸ್ಪರ್ಧಿಗಳು   

ಕಲಬುರಗಿ: ಸ್ವಚ್ಛ ಸರ್ವೇಕ್ಷಣ, ಸ್ವಚ್ಛ ಭಾರತ ಹಾಗೂ ಅಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ನಗರದ ಜನತೆಯಲ್ಲಿ ಸ್ವಚ್ಛತೆಯ ಅರಿವು ಮೂಡಿಸಲು ಮಹಾನಗರ ಪಾಲಿಕೆಯು ಸೋಮವಾರ ಬೆಳಿಗ್ಗೆ ನಗರದಲ್ಲಿ ಆಯೋಜಿಸಿದ್ದ ಮ್ಯಾರಥಾನ್ ಓಟಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ‌ ನಿರಾಣಿ ಚಾಲನೆ ನೀಡಿದರು.

ಹಸಿರು ಕಲಬುರಗಿ ಜಾಗೃತಿಗೆ ಕಲಬುರಗಿ ಕೋಟೆಯಿಂದ ಆರಂಭಗೊಂಡ ಓಟ ಜಗತ್ ವೃತ್ತ, ಅನ್ನಪೂರ್ಣ ಕ್ರಾಸ್, ಖರ್ಗೆ ಪೆಟ್ರೋಲ್ ಪಂಪ್ ಮಾರ್ಗವಾಗಿ ಟೌನ್ ಹಾಲ್ ಬಳಿ ಕೊನೆಗೊಂಡಿತು.

ಸುಮಾರು 1000ಕ್ಕೂ ಅಧಿಕ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ನೌಕರರು, ಕ್ರೀಡಾಪಟುಗಳು, ಸಾರ್ವಜನಿಕರು ಭಾಗವಹಿಸಿದ್ದರು.

ADVERTISEMENT

ಪಾಲಿಕೆಯಿಂದ ಆಯೋಜಿಸಿದ್ದ ಈ ಕಾರ್ಯಕ್ರಮಕ್ಕೆ ನಗರದ ಮಣೂರ ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಪ್ರಾಯೋಜಕರು ಸಹಯೋಗ ನೀಡಿದರು.

ವಿಧಾನ‌ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ, ಮಹಾನಗರ ಪಾಲಿಕೆಯ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದಿಲೀಷ್ ಶಶಿ, ಡಿಸಿಪಿ ಅಡ್ಡೂರು ಶ್ರೀನಿವಾಸಲು ಸೇರಿದಂತೆ ಪಾಲಿಕೆ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.