ADVERTISEMENT

ಗಾಂಜಾ ಸಾಗಾಟ: ಆರೋಪಿ ಕಾಲಿಗೆ ಪೊಲೀಸರ ಗುಂಡೇಟು

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2021, 7:14 IST
Last Updated 22 ಫೆಬ್ರುವರಿ 2021, 7:14 IST
   


ಕಲಬುರ್ಗಿ: ನಗರ ಹೊರವಲಯದ ಸ್ವಾಮಿ ಸಮರ್ಥ ದೇವಸ್ಥಾನದ ಬಳಿ ಭಾನುವಾರ ರಾತ್ರಿ ಗಾಂಜಾ ಸಾಗಣೆ ಮಾಡುತ್ತಿದ್ದ ಆರೋಪಿ ಬಲಗಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ.

ನಗರ ಹೊರವಲಯದಲ್ಲಿ ನಾಲ್ವರ ತಂಡವೊಂದು ಗಾಂಜಾ ಮಾರುತ್ತಿದೆ ಎಂಬ ಮಾಹಿತಿ ಆಧರಿಸಿ ದಾಳಿ ನಡೆಸಿದ ರೌಡಿ ನಿಗ್ರಹದಳದ ಪೂಲೀಸರು, ಆರೋಪಿಗಳನ್ನು ಮಾಲು ಸಮೇತ ಬಂಧಿಸಲು ಮುಂದಾದರು. ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದರು. ಆತ್ಮರಕ್ಷಣೆಗಾಗಿ ಅವರ ಮೇಲೆ ಗುಂಡು ಹಾರಿಸಬೇಕಾಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರೌಡಿ ನಿಗ್ರಹ ದಳದ ಪಿಎಸ್ಐ ವಾಹೀದ್ ಕೋತ್ವಾಲ್ ಅವರು ಹಾರಿಸಿದ ಗುಂಡು ಆರೋಪಿ ಭೀಮು (34) ಬಲಗಾಲಿಗೆ ಬಿದ್ದಿದೆ. ತಕ್ಷಣ ಆತನನ್ನು ಬಂಧಿಸಿ, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು.

ADVERTISEMENT

ಗುಂಡೇಟಿನಿಂದ ಗಾಯಗೊಂಡ ಆರೋಪಿ ಬೀದರ್ ಜಿಲ್ಲೆಯ ಹುಮನಾಬಾದ್ ತಾಲ್ಲೂಕಿನ ಜಲಸಂಗಿ ಗ್ರಾಮದ ನಿವಾಸಿ.

ಬೀಮು ಮತ್ತು ಆತನ ಜತೆ ಮೂವರು ಸೇರಿ ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದರು. ಅವರಿಂದ 300 ಕೆಜಿಗೂ ಅಧಿಕ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.