ADVERTISEMENT

ಖಾರದಪುಡಿ ಎರಚಿ ₹5 ಲಕ್ಷ ದೋಚಿದ ಮುಸುಕುಧಾರಿಗಳು

​ಪ್ರಜಾವಾಣಿ ವಾರ್ತೆ
Published 24 ಜನವರಿ 2026, 3:10 IST
Last Updated 24 ಜನವರಿ 2026, 3:10 IST
ಕಳ್ಳತನ ಪ್ರಕರಣ ನಡೆದ ಸ್ಥಳಕ್ಕೆ ಎಸ್‌ಪಿ ಅಡ್ಡೂರು ಶ್ರೀನಿವಾಸಲು ಭೇಟಿ ನೀಡಿ ಪರಿಶೀಲನೆ ನಡೆಸಿದರು
ಕಳ್ಳತನ ಪ್ರಕರಣ ನಡೆದ ಸ್ಥಳಕ್ಕೆ ಎಸ್‌ಪಿ ಅಡ್ಡೂರು ಶ್ರೀನಿವಾಸಲು ಭೇಟಿ ನೀಡಿ ಪರಿಶೀಲನೆ ನಡೆಸಿದರು   

ವಾಡಿ: ಬೈಕ್ ಮೇಲೆ ತೆರಳುತ್ತಿದ್ದ ವ್ಯಕ್ತಿಗಳ ಮೇಲೆ ಇಬ್ಬರು ಮುಸುಕುಧಾರಿಗಳು ಖಾರದಪುಡಿ ಎರಚಿ ₹5 ಲಕ್ಷ ದೋಚಿದ ಘಟನೆ ಲಾಡ್ಲಾಪುರ ಸಮೀಪ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಅಲಹಳ್ಳಿಯ ಜ್ಯೋತಿ ವೈನ್‌ಶಾಪ್ ಮ್ಯಾನೇಜರ್ ಬಾಪರೆಡ್ಡಿ ನಾಚವಾರ ಹಾಗೂ ಯಂಕಪ್ಪ ಕಟ್ಟಿಮನಿ ಅವರು ₹5 ಲಕ್ಷ ತೆಗೆದುಕೊಂಡು ಬೈಕ್ ಮೇಲೆ ತೆರಳುತ್ತಿದ್ದರು. ಈ ವೇಳೆ ಲಾಡ್ಲಾಪುರ ಹತ್ತಿರ ಅಡ್ಡಗಟ್ಟಿದ ಇಬ್ಬರು ಮುಸುಕುಧಾರಿ ವ್ಯಕ್ತಿಗಳುಮ ಅವರ ಕಣ್ಣಿಗೆ ಖಾರದ ಪುಡಿ ಎರಚಿ, ನಂತರ ಚಾಕು ತೋರಿಸಿ ಹಣ ಇರುವ ಬ್ಯಾಗ್ ಕಿತ್ತುಕೊಂಡು ಪರಾರಿಯಾಗಿದ್ದಾರೆ.

ವಾಡಿ ಠಾಣೆಯಲ್ಲಿ ದೂರು ದಾಖಲಾಗಿದೆ.

ADVERTISEMENT

ಘಟನಾ ಸ್ಥಳಕ್ಕೆ ಎಸ್‌ಪಿ ಅಡ್ಡೂರು ಶ್ರೀನಿವಾಸಲು, ಶಹಾಬಾದ್‌ ಡಿವೈಎಸ್ಪಿ ಶಂಕರಗೌಡ ಪಾಟೀಲ, ಚಿತ್ತಾಪುರ ಸಿಪಿಐ ಪಿ.ಎಸ್ ಹೊನ್ನಂಜೆಕರ, ವಾಡಿ ಪಿಎಸ್ಐ ತಿರುಮಲೇಶ ಕೆ ಹಾಗೂ ರೇಣುಕಾ ಉಡಗಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.