ADVERTISEMENT

ಮದರ್ ತೆರೆಸಾ ಶಾಲೆಯಲ್ಲಿ ಮೆಹಂದಿ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2022, 11:49 IST
Last Updated 1 ಆಗಸ್ಟ್ 2022, 11:49 IST
ಕಲಬುರಗಿಯ ಗೋದುತಾಯಿ ನಗರದ ಮದರ್ ತೆರೆಸಾ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ್ದ ಮೆಹಂದಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಪೋಷಕರು ಹಾಗೂ ಶಿಕ್ಷಕಿಯರು
ಕಲಬುರಗಿಯ ಗೋದುತಾಯಿ ನಗರದ ಮದರ್ ತೆರೆಸಾ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ್ದ ಮೆಹಂದಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಪೋಷಕರು ಹಾಗೂ ಶಿಕ್ಷಕಿಯರು   

ಕಲಬುರಗಿ: ಗೋದುತಾಯಿ ಬಡಾವಣೆಯಲ್ಲಿರುವ ಮದರ್ ತೆರೆಸಾ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಮಹಿಳೆಯರಿಗಾಗಿ ನಾಗರ ಪಂಚಮಿ ಹಬ್ಬದ ಮುನ್ನಾದಿನ ಶಾಲಾ ವಿದ್ಯಾರ್ಥಿನಿಯರಿಗೆ ಹಾಗೂ ವಿದ್ಯಾರ್ಥಿನಿಯರ ತಾಯಂದಿರಿಗೆ (ಪಾಲಕರಿಗಾಗಿ) ಶಾಲಾ ಆವರಣದಲ್ಲಿ ಮೆಹಂದಿ ಸ್ಪರ್ಧೆ ಏರ್ಪಡಿಸಲಾಗಿತ್ತು.

ವಿದ್ಯಾರ್ಥಿನಿಯರು ಹಾಗೂ ಪಾಲಕರು ಮೆಹಂದಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಸ್ಪರ್ಧೆಯ ಮುಖ್ಯ ಉದ್ದೇಶ ಭಾರತೀಯ ಸಂಸ್ಕೃತಿಯಲ್ಲಿ ಅದು ಶ್ರಾವಣ ಮಾಸದ ಪ್ರಾರಂಭದಲ್ಲಿ ಮೆಹಂದಿ ಹಾಕಿಕೊಳ್ಳುವ ಪರಂಪರೆ ಇದೆ ಹಾಗೂ ಶುಭ ಸಂಕೇತವಾಗಿದೆ. ಮೆಹಂದಿಯಲ್ಲಿ ಔಷಧೀಯ ಗುಣವಿದ್ದು ಅನೇಕ ರೋಗಗಳಿಗೆ ರಾಮಬಾಣವಾಗಿದೆ ಹಾಗೂ ಮೆಹಂದಿಯು ಮಹಿಳೆಯರ ಅಲಂಕಾರಕ್ಕಾಗಿ ಹಾಗೂ ಸೌಂಧರ್ಯವರ್ಧಕಗಳಲ್ಲಿ ಬಳಸಲಾಗುತ್ತದೆ ಎಂದು ಪ್ರಭಾರ ಮುಖ್ಯ ಶಿಕ್ಷಕಿ ಮನಿಷಾ ಜೋಶಿ ಅಭಿಪ್ರಾಯಪಟ್ಟರು.

ADVERTISEMENT

ಉತ್ತಮ ಮೆಹಂದಿ ಬಿಡಿಸಿದ ವಿಜೇತರಿಗೆ ಸ್ಥಳದಲ್ಲಿಯೇ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ನೀಡಲಾಯಿತು.

ಆಡಳಿತ ಮಂಡಳಿಯ ಕಾರ್ಯದರ್ಶಿ ಶಿವಪುತ್ರಪ್ಪಾ ಡೆಂಕಿ ಶ್ರಾವಣ ಮಾಸದ ಅಂಗವಾಗಿ ಏರ್ಪಡಿಸಿದ್ದ ಮೆಹಂದಿ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಭಾಗವಹಿಸಿದ ವಿದ್ಯಾರ್ಥಿನಿಯರಿಗೆ, ತಾಯಂದಿರಿಗೆ ಶುಭ ಕೋರಿದರು. ಶಾಲೆಯ ಪ್ರಾಂಶುಪಾಲ ನಾಗೇಂದ್ರ ಬಡಿಗೇರ, ಶಿಕ್ಷಕ ವೃಂದದವರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.