ADVERTISEMENT

ಕಲಬುರಗಿ | 'ಋತುಚಕ್ರ ರಜೆ ನೀಡಲು ಸೂಚನೆ'

​ಪ್ರಜಾವಾಣಿ ವಾರ್ತೆ
Published 15 ಜನವರಿ 2026, 6:22 IST
Last Updated 15 ಜನವರಿ 2026, 6:22 IST
   

ಕಲಬುರಗಿ: ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಜಿಲ್ಲೆಯ ಎಲ್ಲ ಕೈಗಾರಿಕೆಗಳು, ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜಾ ಸೌಲಭ್ಯವನ್ನು ನೀಡಬೇಕು ಎಂದು ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತರು ಸೂಚಿಸಿದ್ದಾರೆ.

18ರಿಂದ 52 ವರ್ಷದ ವಯೋಮಿತಿಯ ಎಲ್ಲ ಕಾಯಂ, ಗುತ್ತಿಗೆ, ಹೊರಗುತ್ತಿಗೆ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಪ್ರತಿ ತಿಂಗಳು ಒಂದು ದಿನದಂತೆ ವಾರ್ಷಿಕ 12 ದಿನಗಳ ವೇತನ ಸಹಿತ ರಜೆ ಸೌಲಭ್ಯವನ್ನು ಉದ್ಯೋಗದಾತರು ಒದಗಿಸಬೇಕು ಎಂದು ಸರ್ಕಾರ ಆದೇಶಿಸಿದ್ದು, ಮಹಿಳಾ ನೌಕರರು ಆಯಾ ತಿಂಗಳ ಋತುಚಕ್ರದ ರಜೆಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳಬೇಕು. ಈ ರಜೆ ಪಡೆಯಲು ವೈದ್ಯಕೀಯ ಪ್ರಮಾಣಪತ್ರ ಒದಗಿಸುವ ಅವಶ್ಯಕತೆ ಇರುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT