ಕಲಬುರಗಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಏ.25ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಿನಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.
ಎಚ್‌ಸಿಎಲ್‌ದಲ್ಲಿ ಟ್ರೈನಿ ಹುದ್ದೆ, ಚೈತನ್ಯ ಫೈನಾನ್ಸ್‌ದಲ್ಲಿ ಫೀಲ್ಡ್ ಆಫೀಸರ್, ಬ್ರ್ಯಾಂಚ್ ಮ್ಯಾನೇಜರ್ ಹುದ್ದೆ, ಕೆಎನ್‌ಎನ್‌ಡಿಯಲ್ಲಿ ಎಸಿ ಟೆಕ್ನಿಶಿಯನ್, ಜಿಟಿಟಿಐದಲ್ಲಿ ಟ್ರೈನಿ ಹುದ್ದೆ, ಎಸ್‌ಆರ್‌ವಿ ಎಲೆಕ್ಟ್ರಾನಿಕ್ಸ್‌ದಲ್ಲಿ ಟೆಕ್ನಿಶಿಯನ್ / ಹೆಲ್ಪರ್ ಹುದ್ದೆಗೆ ಸಂದರ್ಶನ ನಡೆಯಲಿದೆ. ಮಾಹಿತಿಗಾಗಿ ದೂ:08472-274846, ಮೊ: 96200 95270 ಸಂಪರ್ಕಿಸಿ.
ಪುನರ್ವಸತಿ ಕಾರ್ಯಕರ್ತರ ನೇಮಕ: ಅರ್ಜಿ ಆಹ್ವಾನ
ಕಲಬುರಗಿ: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಜಿಲ್ಲೆಯಲ್ಲಿ ಖಾಲಿಯಿರುವ 8 ಹಳೆಯ ಗ್ರಾಮ ಪಂಚಾಯಿತಿಗಳಿಗೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಕಾಳಗಿ ತಾಲ್ಲೂಕಿನ ಟೆಂಗಳಿ ಮತ್ತು ಮಾಡಬೂಳ ಗ್ರಾಮ ಪಂಚಾಯಿತಿ, ಆಳಂದ ತಾಲ್ಲೂಕಿನ ಹಿತ್ತಲಶಿರೂರ, ಕಮಲಾಪುರ ತಾಲ್ಲೂಕಿನ ಓಕಳಿ ಮತ್ತು ಮಡಕಿ, ಸೇಡಂ ತಾಲ್ಲೂಕಿನ ಕೋಲಕುಂದಾ ಮತ್ತು ಮಳಖೇಡ ಹಾಗೂ ಜೇವರ್ಗಿ ತಾಲ್ಲೂಕಿನ ಕೋಳಕೂರ ಗ್ರಾಮ ಪಂಚಾಯಿತಿಗೆ ಮಾಸಿಕ ₹ 9000 ಗೌರವಧನ ಆಧಾರದ ಮೇಲೆ ನೇಮಕ ನಡೆಯಲಿದೆ.
ಅರ್ಜಿ ನಮೂನೆಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿಯಿಂದ ಪಡೆದು ಅವಶ್ಯಕ ದಾಖಲೆಗಳೊಂದಿಗೆ ಮೇ 5ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ:08472-235222 ಸಂಪರ್ಕಿಸಬಹುದು.
ಪ್ರತಿಷ್ಠಿತ ಶಾಲೆಗಳಿಗೆ ಪ್ರವೇಶ: ಅರ್ಜಿ ಆಹ್ವಾನ
ಕಲಬುರಗಿ: 2025-26ನೇ ಸಾಲಿಗೆ ಜಿಲ್ಲೆ ವ್ಯಾಪ್ತಿಯಲ್ಲಿನ ಪ್ರತಿಷ್ಠಿತ ಶಾಲೆಗಳಿಗೆ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು (ಅರ್ಹತಾ ಪರೀಕ್ಷೆ ಮೂಲಕ ಆಯ್ಕೆ ಮಾಡಲು) ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಹೆಚ್ಚುವರಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2024–25ನೇ ಸಾಲಿನ 5ನೇ ತರಗತಿಯಲ್ಲಿ ಕಡ್ಡಾಯವಾಗಿ ಶೇ 60ರಷ್ಟು ಅಂಕಗಳನ್ನು ಪಡೆದಿರಬೇಕು. ಸರ್ಕಾರಿ ನೌಕರರ ಮಕ್ಕಳು ಈ ಯೋಜನೆಗೆ ಅರ್ಹರಲ್ಲ. ಅರ್ಜಿ ನಮೂನೆಯನ್ನು ಇಲಾಖೆಯ ಹೆಚ್ಚುವರಿ ನಿರ್ದೇಶಕರ ಕಚೇರಿ ಅಥವಾ ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು, ಗ್ರೇಡ್-1/2 ಕಚೇರಿಯಿಂದ ಪಡೆದು ದಾಖಲೆಗಳೊಂದಿಗೆ ಮೇ 3ರೊಳಗಾಗಿ ಅರ್ಜಿ ಸಲ್ಲಿಸಬೇಕು. ಮೇ 5ರಂದು ಅರ್ಜಿಗಳ ಪರಿಶೀಲನೆ ನಡೆಯಲಿದೆ. ಮೇ 9ರಂದು ಡಯಟ್ ಮೂಲಕ ಪ್ರವೇಶ ಪರೀಕ್ಷೆ ನಡೆಯಲಿದೆ. ಮೇ 13ರಂದು ಪ್ರವೇಶ ಪರೀಕ್ಷೆಯ ಫಲಿತಾಂಶ ಘೋಷಣೆ ಮಾಡಲಾಗುತ್ತದೆ. ಮೇ 17ರಂದು ಅರ್ಹ ವಿದ್ಯಾರ್ಥಿಗಳನ್ನು ಕೌನ್ಸೆಲಿಂಗ್ ಮೂಲಕ ಆಯ್ಕೆ ಮಾಡಲಾಗುತ್ತದೆ. ಮೇ 31ರಂದು ಆಯ್ಕೆಯಾದ ಶಾಲೆಗೆ ದಾಖಲಾಗಲು ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ: 08472–278621, ಮೊ: 94808 43034 ಸಂಪರ್ಕಿಸಲು ಕೋರಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.