ADVERTISEMENT

25ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2024, 15:43 IST
Last Updated 22 ಅಕ್ಟೋಬರ್ 2024, 15:43 IST

ಕಲಬುರಗಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಕ್ಟೋಬರ್ 25 ರಂದು ಶುಕ್ರವಾರ ಬೆಳಿಗ್ಗೆ ಕಲಬುರಗಿಗೆ ಆಗಮಿಸುವರು.

ಅಂದು ಬೆಳಿಗ್ಗೆ 11 ಗಂಟೆಗೆ ಚಿತ್ತಾಪುರದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಅಕ್ಟೋಬರ್ 26 ರಂದು ಕಲಬುರಗಿ ಜಿಲ್ಲಾ ಕೇಂದ್ರದಲ್ಲಿ ನಿಗದಿತ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.

ವೈದ್ಯಕೀಯ ಶಿಕ್ಷಣ ಸಚಿವರ ಪ್ರವಾಸ: ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ಅಕ್ಟೋಬರ್ 23 ರಿಂದ 27 ರ ವರೆಗೆ ಕಲಬುರಗಿಯಲ್ಲಿ ಸ್ಥಳಿಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ವಾಸ್ತವ್ಯ ಮಾಡುವರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.