ADVERTISEMENT

ಕಲಬುರಗಿ | ಮಹಿಳಾ ಪದವಿ ಕಾಲೇಜಿಗೆ ಸಚಿವ ಸುಧಾಕರ್ ಭೇಟಿ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2024, 4:52 IST
Last Updated 13 ಆಗಸ್ಟ್ 2024, 4:52 IST
ಕಲಬುರಗಿ‌ಯ ಹಳೆ ಜೇವರ್ಗಿ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ ಭೇಟಿ ನೀಡಿದ್ದ ಸಚಿವ ಡಾ.ಎಂ.ಸಿ. ಸುಧಾಕರ್ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದರು. ಶಾಸಕ ಅಲ್ಲಮಪ್ರಭು ಪಾಟೀಲ ಈ ಸಂದರ್ಭದಲ್ಲಿದ್ದರು
–ಪ್ರಜಾವಾಣಿ ಚಿತ್ರ
ಕಲಬುರಗಿ‌ಯ ಹಳೆ ಜೇವರ್ಗಿ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ ಭೇಟಿ ನೀಡಿದ್ದ ಸಚಿವ ಡಾ.ಎಂ.ಸಿ. ಸುಧಾಕರ್ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದರು. ಶಾಸಕ ಅಲ್ಲಮಪ್ರಭು ಪಾಟೀಲ ಈ ಸಂದರ್ಭದಲ್ಲಿದ್ದರು –ಪ್ರಜಾವಾಣಿ ಚಿತ್ರ    

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗವಹಿಸಲು ಸೋಮವಾರ ನಗರಕ್ಕೆ ಬಂದಿದ್ದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ನಗರದ ಹಳೇ ಜೇವರ್ಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ರಾಜಾಪುರದ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಗಳು, ಪ್ರಾಧ್ಯಾಪಕರೊಂದಿಗೆ ಸಂವಾದ ನಡೆಸಿದರು.

ಸಚಿವರನ್ನು ಸ್ವಾಗತಿಸಿದ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರು ಕಾಲೇಜಿನಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳ ಕುರಿತು ಮನವಿ ಪತ್ರ ಸಲ್ಲಿಸಿದರು.

ಕಾಲೇಜಿಗೆ ವಿಶ್ವವಿದ್ಯಾಲಯದ ಕಾನ್‌ಸ್ಟಿಟುವೆಂಟ್ ಕಾಲೇಜಿನ ಮಾನ್ಯತೆ ನೀಡಬೇಕು, ವಾಣಿಜ್ಯಶಾಸ್ತ್ರ, ಇತಿಹಾಸ, ರಾಜ್ಯಶಾಸ್ತ್ರ, ಗಣಿತಶಾಸ್ತ್ರ, ಅರ್ಥಶಾಸ್ತ್ರ ಹಾಗೂ ಕನ್ನಡ ಸ್ನಾತಕೋತ್ತರ ವಿಭಾಗಗಳಿಗೆ ಅಧ್ಯಯನ ಕೇಂದ್ರಗಳನ್ನು ಮಂಜೂರು ಮಾಡುವಂತೆ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ನಿರ್ದೇಶನ ನೀಡಬೇಕು, ಕಾಲೇಜು ಭೂಮಿಯ ವಿವಾದ ಬಗೆಹರಿಸಬೇಕು, ಆಟದ ಮೈದಾನ ಒದಗಿಸಬೇಕು, ಇಪ್ಪತ್ತು ಬೋಧನಾ ಕೊಠಡಿಗಳನ್ನು ನಿರ್ಮಿಸಬೇಕು, ಎರಡು ಕಂಪ್ಯೂಟರ್ ಸೈನ್ಸ್ ಪ್ರಯೋಗಾಲಯ ಒದಗಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.