ಚಿಂಚೋಳಿ: ‘ಮೈಸೂರಿನ ಚಾಮುಂಡಿ ಬೆಟ್ಟದಿಂದ ಬೆಂಗಳೂರಿನ ಸ್ವಾತಂತ್ಯ ಉದ್ಯಾನದವರೆಗೆ ಪಾದಯಾತ್ರೆ ಹಮ್ಮಿಕೊಂಡು ಒಳಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಬಿ.ಆರ್.ಭಾಸ್ಕರ್ ಪ್ರಸಾದ ಮತ್ತು ಅವರ ತಂಡವನ್ನು ಪೊಲೀಸರು ಬಂಧಿಸಿರುವುದಕ್ಕೆ ಸಚಿವ ಎಚ್.ಸಿ.ಮಹಾದೇವಪ್ಪ ಅವರ ಕುಮ್ಮಕ್ಕು ಕಾರಣ’ ಎಂದು ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ರಾಜ್ಯ ಸಂಚಾಲಕ ಗೋಪಾಲರಾವ್ ಕಟ್ಟಿಮನಿ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಂಧಿತರನ್ನು ತಕ್ಷಣ ಬಿಡುಗಡೆ ಮಾಡಬೇಕು. ಮಾದಿಗ ಸಮುದಾಯದ ಜನರ ತಾಳ್ಮೆ ಪರೀಕ್ಷೆಗೆ ಹೋಗದೇ ಬಂಧಿತರನ್ನು ಬಿಡುಗಡೆ ಮಾಡಬೇಕು. ಪಾದಯಾತ್ರೆಗೆ ಅನುವು ಮಾಡಿಕೊಡಬೇಕು. ಸರ್ಕಾರ ಈ ಹೋರಾಟ ಹತ್ತಿಕ್ಕಲು ಮುಂದಾದರೆ ಜನರೇ ಪಾಠ ಕಲಿಸುತ್ತಾರೆ. ಸರ್ಕಾರ ವ್ಯರ್ಥ ಕಾಲ ಹರಣ ಮಾಡಿದರೆ ಬೀದಿಗಿಳಿದು ಹೋರಾಟ ನಡೆಸಲಾಗುವುದು’ ಎಂದರು.
ಮಲ್ಲು ಕೂಡಾಂಬಲ್, ಆಕಾಶ ಕೊಳ್ಳೂರು, ವಿಜಯರಾಜ ಕೊರಡಂಪಳ್ಳಿ, ಸುರೇಂದ್ರ ಪೋಲಕಪಳ್ಳಿ, ಸುರೇಶ ನರನಾಳ ಮೊದಲಾದವರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.