ADVERTISEMENT

ರಸ್ತೆ ಸುಧಾರಣೆ ಕಾಮಗಾರಿಗೆ ಶಂಕುಸ್ಥಾಪನೆ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2019, 1:54 IST
Last Updated 11 ಡಿಸೆಂಬರ್ 2019, 1:54 IST
ಗುರುಮಠಕಲ್ ತಾಲ್ಲೂಕಿನ ಯಲ್ಹೇರಿ ಗ್ರಾಮದಲ್ಲಿ ನಡೆದ ರಸ್ತೆ ಸುಧಾರಣೆ ಕಾಮಗಾರಿಗೆ ಶಾಸಕ ನಾಗನಗೌಡ ಕಂದಕೂರ ಶಂಕುಸ್ಥಾಪನೆ ನೆರವೇರಿಸಿದರು
ಗುರುಮಠಕಲ್ ತಾಲ್ಲೂಕಿನ ಯಲ್ಹೇರಿ ಗ್ರಾಮದಲ್ಲಿ ನಡೆದ ರಸ್ತೆ ಸುಧಾರಣೆ ಕಾಮಗಾರಿಗೆ ಶಾಸಕ ನಾಗನಗೌಡ ಕಂದಕೂರ ಶಂಕುಸ್ಥಾಪನೆ ನೆರವೇರಿಸಿದರು   

ಯಾದಗಿರಿ: ‘ಅಭಿವೃದ್ಧಿ ವಿಷಯದಲ್ಲಿ ನಾನು ಎಂದಿಗೂ ತಾರತಮ್ಯ ಮಾಡಿಲ್ಲ. ಕ್ಷೇತ್ರದ ಜನತೆ ನನಗೆ ಕಳೆದ ಚುನಾವಣೆಯಲ್ಲಿ ಆಶೀರ್ವಾದ ಮಾಡಿ ವಿಧಾನಸಭೆಗೆ ಕಳಿಸಿದ್ದು, ನಿಮ್ಮೆಲ್ಲರ ಸಹಕಾರದಿಂದ ನಿರೀಕ್ಷೆ ಹುಸಿಗೊಳಿಸದಂತೆ ಕೆಲಸ ಮಾಡುತ್ತೇನೆ’ ಎಂದು ಶಾಸಕ ನಾಗನಗೌಡ ಕಂದಕೂರ ಹೇಳಿದರು.

ಗುರುಮಠಕಲ್ ತಾಲ್ಲೂಕಿನ ಯಲ್ಹೇರಿ ಗ್ರಾಮದಲ್ಲಿ ಲೋಕೊಪಯೋಗಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ರಸ್ತೆ ಸುಧಾರಣೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
‘ಈ ಹಿಂದೆ ಆಡಳಿತದಲ್ಲಿದ್ದ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕ್ಷೇತ್ರಕ್ಕೆ ಕೊಟ್ಟಿದ್ದ ಅನುದಾನವನ್ನು ಬಿಜೆಪಿ ಸರ್ಕಾರ ವಾಪಸ್ ಪಡೆದುಕೊಳ್ಳುವ ಮೂಲಕ ದ್ವೇಷದ ರಾಜಕೀಯಕ್ಕೆ ನಾಂದಿ ಹಾಡುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

‘ಗಡಿ ಭಾಗದಲ್ಲಿರುವ ಕ್ಷೇತ್ರದಲ್ಲಿ ಮೂಲಸೌಕರ್ಯ ಒದಗಿಸಲು ಬದ್ಧನಾಗಿದ್ದು, ಜನತೆಗೆ ಚುನಾವಣೆ ವೇಳೆ ಕೊಟ್ಟ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ’ ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಂತಾ, ಜಿಲ್ಲಾ ಪಂಚಾಯಿತಿ ಸದಸ್ಯೆ ರಾಜಶ್ರೀ ನಜರಾಪುರ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.