
ಪ್ರಜಾವಾಣಿ ವಾರ್ತೆ
ಕಲಬುರಗಿ: ದೆಹಲಿಯಲ್ಲಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಅಂಗವಾಗಿ ಹಿಂದೂ ಜಾಗೃತಿ ಸೇನೆಯ ಮುಖಂಡರು ಭಾನುವಾರ ಸಂಭ್ರಮಿಸಿದರು.
ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಜಮಾಯಿಸಿದ ಮುಖಂಡರು, ಮೋದಿ ಅಭಿಮಾನಿಗಳು ಮೋದಿ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದರು. ಪರಸ್ಪರ ಬಣ್ಣ ಎರಚಿ, ಸಿಹಿ ತಿನಿಸಿ ಸಂಭ್ರಮಿಸಿದರು.
ಸೇನೆಯ ಜಿಲ್ಲಾ ಅಧ್ಯಕ್ಷ ಲಕ್ಷ್ಮಿಕಾಂತ ಸ್ವಾದಿ ಸೇರಿ ಹಲವರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.