ಆಸ್ಪತ್ರೆ
ill
ಜೇವರ್ಗಿ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಮಾರಡಗಿ ಎಸ್.ಎ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಬಿಸಿಯೂಟ ಸೇವಿಸಿ 70ಕ್ಕೂ ಅಧಿಕ ಮಕ್ಕಳು ಅಸ್ವಸ್ಥಗೊಂಡರು.
ಮಕ್ಕಳಿಗೆ ವಾಂತಿ, ಜ್ವರ ಕಾಣಿಸಿಕೊಂಡಿದೆ. ಸಮೀಪದ ಗಂವ್ಹಾರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ, ಬಳಿಕ ಜೇವರ್ಗಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
‘70 ಮಕ್ಕಳು ಬಿಸಿಯೂಟ ಮಾಡಿದ್ದಾರೆ. ಊಟದಲ್ಲಿ ಖಾರದ ಪುಡಿಯಿಂದ ಸಮಸ್ಯೆ ಆಗಿರಬಹುದು’ ಎಂದು ಮುಖ್ಯಶಿಕ್ಷಕಿ ತ್ರಿವೇಣಿ ತಿಳಿಸಿದರು. ‘ಚಿಕಿತ್ಸೆ ನೀಡಲಾಗುತ್ತಿದ್ದು, ಮಕ್ಕಳು ಚೇತರಿಸಿಕೊಳ್ಳುತ್ತಿದ್ದಾರೆ’ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಉಮೇಶ್ ಶರ್ಮಾ ‘ಪ್ರಜಾವಾಣಿ’ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.