ADVERTISEMENT

ಬಿಎಸ್‌ವೈ ಬಳಿ ರೈಲ್ವೆ ವಿಭಾಗ ಪ್ರಸ್ತಾಪಿಸಿದ ಜಾಧವ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2020, 6:09 IST
Last Updated 28 ನವೆಂಬರ್ 2020, 6:09 IST

ಕಲಬುರ್ಗಿ: ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕರೆದಿದ್ದ ಸಂಸದರ ಸಭೆಯಲ್ಲಿ ಕಲಬುರ್ಗಿ ಸಂಸದ ಡಾ.ಉಮೇಶ ಜಾಧವ ಅವರು ಕಲಬುರ್ಗಿಯಲ್ಲಿ ರೈಲ್ವೆ ವಿಭಾಗೀಯ ಕಚೇರಿ ರಚನೆಯಾಗುವುದು ಬಾಕಿ ಇರುವುದರ ಬಗ್ಗೆ ಗಮನ ಸೆಳೆದರು.

ಸುರೇಶ ಅಂಗಡಿ ಅವರು ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸಂದರ್ಭದಲ್ಲಿ ವಿಭಾಗ ಕಚೇರಿ ರಚನೆಗೆ ಪ್ರಕ್ರಿಯೆ ಆರಂಭಿಸಿದ್ದರು. ಅವರು ನಿಧನರಾದ ಬಳಿಕ ಮತ್ತೆ ನನೆಗುದಿಗೆ ಬಿದ್ದಿದ್ದು, ಈ ಸಂಬಂಧ ರೈಲ್ವೆ ಸಚಿವ ಪಿಯೂಷ್‌ ಗೋಯಲ್ ಅವರ ಗಮನಕ್ಕೆ ತರಬೇಕು ಎಂದು ಡಾ.ಜಾಧವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದರು.

ಕಲಬುರ್ಗಿ ಇಎಸ್‌ಐಸಿ ಆಸ್ಪತ್ರೆಯನ್ನು ಏಮ್ಸ್ ಮಾದರಿಯಲ್ಲಿ ಮೇಲ್ದರ್ಜೆಗೇರಿಸಲು ಕೇಂದ್ರದ ಮೇಲೆ ಒತ್ತಡ ಹೇರಬೇಕು. ಅದಕ್ಕಾಗಿ ಹೆಚ್ಚುವರಿಯಾಗಿ 150 ಎಕರೆ ಭೂಮಿಯನ್ನು ಕೊಡಿಸಲಾಗುವುದು ಎಂದರು.

ADVERTISEMENT

ಸರ್ಕಾರಿ ಸ್ವಾಮ್ಯದ ಸಿಮೆಂಟ್ ಕಾರ್ಖಾನೆಯನ್ನು ಪುನರಾರಂಭಿಸಬೇಕು. ಚಿಂಚೋಳಿಯಲ್ಲಿರುವ ಸಕ್ಕರೆ ಕಾರ್ಖಾನೆಗೆ ಪುನಶ್ಚೇತನ ನೀಡಲು ಕ್ರಮ ಕೈಗೊಳ್ಳಬೇಕು ಎಂದೂ ತಿಳಿಸಿರುವುದಾಗಿ ಸಂಸದ ಡಾ. ಜಾಧವ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.