ADVERTISEMENT

ಕಲಬುರ್ಗಿ: ಸಂಸದ ಡಾ.ಉಮೇಶ ಜಾಧವ ಸ್ವಗ್ರಾಮದಲ್ಲೇ ಹದಗೆಟ್ಟ ರಸ್ತೆ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2021, 4:40 IST
Last Updated 8 ಸೆಪ್ಟೆಂಬರ್ 2021, 4:40 IST
ಕಾಳಗಿ ತಾಲ್ಲೂಕಿನ ರುಮ್ಮನಗೂಡ ರಸ್ತೆಯು ಮಳೆಯಿಂದಾಗಿ ಕೆಸರು ಗದ್ದೆಯಂತಾಗಿದೆ
ಕಾಳಗಿ ತಾಲ್ಲೂಕಿನ ರುಮ್ಮನಗೂಡ ರಸ್ತೆಯು ಮಳೆಯಿಂದಾಗಿ ಕೆಸರು ಗದ್ದೆಯಂತಾಗಿದೆ   

ಕಾಳಗಿ: ತಾಲ್ಲೂಕಿನಲ್ಲಿ ಕಳೆದ 4–5 ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಗ್ರಾಮೀಣ ಭಾಗದ ಮಣ್ಣಿನ ರಸ್ತೆಗಳು ತೀವ್ರ ಹದಗೆಟ್ಟು ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ.

ರುಮ್ಮನಗೂಡ ಗ್ರಾಮದ ರಸ್ತೆಯ ಕಾಮಗಾರಿ ಕಳಪೆಯಾಗಿದ್ದು, ಈಗ ಸುರಿದ ಮಳೆಗೆ ಕೆಸರು ಗದ್ದೆಯಂತೆ ಬದಲಾಗಿದೆ. ವರ್ಷದಿಂದ ರಸ್ತೆಯಲ್ಲಿ ತಗ್ಗು–ಗುಂಡಿಗಳು ಬಿದ್ದಿವೆ. ಬಿದ್ದ ಅಲ್ಪ ಮಳೆಗೆ ರಸ್ತೆಯೆಲ್ಲ ಕೆಸರು ಮಯವಾಗುತ್ತದೆ. ಇದರಿಂದ ವಾಹನ ಹಾಗೂ ಸಾರ್ವಜನಿಕರ ಓಡಾಟಕ್ಕೆ ತೊಂದರೆ ಆಗುತ್ತಿದೆ. ಈ ಬಗ್ಗೆ ಜನಪ್ರತಿನಿಧಿ ಹಾಗೂ ಅಧಿಕಾರಿಗಳ ಗಮನಕ್ಕೆ ತಂದರೂ ಸ್ಪಂದಿಸಿಲ್ಲ ಎಂದು ಗ್ರಾಮಸ್ಥ ಮಶಾಖ ಮಡಕಿ ದೂರಿದರು.

ಸಂಸದ ಡಾ.ಉಮೇಶ ಜಾಧವ ಮತ್ತು ಶಾಸಕ ಡಾ.ಅವಿನಾಶ ಜಾಧವ ಅವರ ಸ್ವಗ್ರಾಮ ಬೆಡಸೂರ ತಾಂಡಾದಿಂದ ಮುಕರಂಬಾ ಕ್ರಾಸ್ ವರೆಗಿನ ರಸ್ತೆ ಮಳೆಯಿಂದ ಸಂಪೂರ್ಣವಾಗಿ ಹಾಳಾಗಿದೆ. ಇದೇ ರಸ್ತೆಯು ಜಿಲ್ಲಾ ಕೇಂದ್ರಕ್ಕೆ ಸಂಪರ್ಕಿಸುತ್ತದೆ. ಪ್ರಯಾಣಿಕರು ನಿತ್ಯ ಪರದಾಡುತ್ತಾ ಇದೇ ರಸ್ತೆಯಲ್ಲಿ ಸಂಚರಿಸಬೇಕಿದೆ. ಅಧಿಕಾರಿಗಳು ಕೂಡಲೇ ದುರಸ್ತಿಗೆ ಮುಂದಾಗಬೇಕು ಎಂದು ದಲಿತ ಸೇನೆ ತಾಲ್ಲೂಕು ಘಟಕದ ಸಂಘಟನಾ ಕಾರ್ಯದರ್ಶಿ ಸುರೇಶ ರಾಣಾಪುರ ಆಗ್ರಹಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.