ಕಲಬುರ್ಗಿ: ನಗರದ ಜಾಫರಾಬಾದ್ ಬಡಾವಣೆಯಲ್ಲಿ ದುಷ್ಕರ್ಮಿಗಳು ಆಟೊ ಚಾಲಕ ಸಂತೋಷ ಗುತ್ತೇದಾರ (35) ಎಂಬುವವರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ.
ಮಂಗಳವಾರ ತಡರಾತ್ರಿ ನಾಲ್ವರು ಸ್ನೇಹಿತರೊಂದಿಗೆ ಆಟೊದಲ್ಲಿ ಸಂತೋಷ ಹೊರಹೋಗಿದ್ದರು.
ಸಂತೋಷಗೆ ಮದ್ಯಪಾನ ಮಾಡಿಸಿ ನಶೆ ಏರಿದ ಬಳಿಕ ಕೊಲೆ ಮಾಡಿ ಮನೆ ಬಳಿ ಶವವನ್ನು ಎಸೆದು ಪರಾರಿಯಾಗಿದ್ದಾರೆ.
ಕಲಬುರ್ಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.