ದಾವಣಗೆರೆ: ಇಲ್ಲಿನ ಆಂಜನೇಯ ಕಾಟನ್ ಮಿಲ್ ಬಡಾವಣೆಯಲ್ಲಿ ಈಚೆಗೆ ನಡೆದ ಸಹೋದರಿಯರ ಕೊಲೆ ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲೆಯಾದ ಗೌರಮ್ಮನ ಪತಿ ಮಂಜುನಾಥ (37) ಬಂಧಿತ. ಗೌರಮ್ಮಳ ಮೇಲೆ ಸಂಶಯಪಟ್ಟು ಮಂಜುನಾಥ ಮಚ್ಚಿನಿಂದ ಕೊಲೆ ಮಾಡಿದ್ದಾನೆ.ಕೊಲೆಯಾದ ಸಂದರ್ಭ ರಾಧಮ್ಮಳು ಎಚ್ಚರಗೊಂಡಿದ್ದರಿಂದ ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಎನ್ನಲಾಗಿದೆ.
ಬೆಂಗಳೂರಿನ ಚಂದಾಪುರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.