ಕಲಬುರಗಿ: ತಾಲ್ಲೂಕಿನ ಹೊನ್ನಕಿರಣಗಿ ಗ್ರಾಮಕ್ಕೆ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಶನಿವಾರ ಭೇಟಿ ನೀಡಿ ಕೂಲಿ ಕಾರ್ಮಿಕರೊಂದಿಗೆ ಸಂವಾದ ನಡೆಸಿ ಸಮಸ್ಯೆಗಳನ್ನು ಆಲಿಸಿದರು.
ಬಳಿಕ ಮಾತನಾಡಿದ ಅವರು, ಎಲ್ಲ ಕೂಲಿ ಕಾರ್ಮಿಕರೂ ಮುಂದಿನ ದಿನಗಳಲ್ಲಿ ಉತ್ತಮ ರೀತಿಯಲ್ಲಿ ನರೇಗಾ ಯೋಜನೆಯಡಿ ಕೂಲಿ ಕೆಲಸವನ್ನು ಮಾಡಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್‌ಸಿಂಗ್ ಮೀನಾ ಮಾತನಾಡಿ, ‘ಹೊನ್ನಕಿರಣಗಿ ಗ್ರಾಮ ಪಂಚಾಯತಿ ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ನರೇಗಾ ಯೋಜನೆಯ ಸಾಧನೆ ಹಾಗೂ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುತ್ತಿದೆ. ಪ್ರತಿ ಕೂಲಿ ಕಾರ್ಮಿಕರು ಕೇಂದ್ರ ಸರ್ಕಾರದ ಇನ್ಸೂರೆನ್ಸ್‌ಗಳನ್ನು ಮಾಡಿಸಿಕೊಳ್ಳಬೇಕು’ ಎಂದರು.
ಈ ಸಂವಾದದಲ್ಲಿ ಸುಮಾರು 425 ನರೇಗಾ ಕೂಲಿ ಕಾರ್ಮಿಕರು ಭಾಗವಹಿಸಿದ್ದರು. ಇದೇ ವೇಳೆ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಂ.ಡಿ ಸೈಯದ್ ಪಟೇಲ, ಸಹಾಯಕ ನಿರ್ದೇಶಕ ರೇವಣಸಿದ್ದಪ್ಪ ಗೌಡರ, ಪಿಡಿಒ ಕವಿತಾ ಕಾಗೆ, ತಾಂತ್ರಿಕ ಸಂಯೋಜಕ ಸತೀಶ್, ತಾಂತ್ರಿಕ ಸಹಾಯಕ ಜಗದೀಶ್ ಮೇಗಪ್ಪಿ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.