ADVERTISEMENT

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿಗೆ ‘ಮುಗುಳ್ನಗೆಯ ಮಂದಾರ’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 22 ಜನವರಿ 2026, 23:30 IST
Last Updated 22 ಜನವರಿ 2026, 23:30 IST
ನಾಗಲಕ್ಷ್ಮಿ ಚೌಧರಿ
ನಾಗಲಕ್ಷ್ಮಿ ಚೌಧರಿ   

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಮುಗುಳನಾಗಾವಿಯ ಕಟ್ಟಿಮನಿ ಹಿರೇಮಠ ನೀಡುವ ‘ಮುಗುಳ್ನಗೆಯ ಮಂದಾರ’ ಪ್ರಶಸ್ತಿಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಭಾಜನರಾಗಿದ್ದಾರೆ.

‘ಮಠದ ಪೀಠಾಧಿಪತಿ ಅಭಿನವ ಸಿದ್ಧಲಿಂಗ ಶಿವಾಚಾರ್ಯರ 49ನೇ ಜನ್ಮದಿನದ ಅಂಗವಾಗಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿಯು 5 ಗ್ರಾಂ ಚಿನ್ನ ಹಾಗೂ ಫಲಪುಷ್ಪಗಳನ್ನು ಒಳಗೊಂಡಿದೆ’ ಎಂದು ಮಠದ ಭಕ್ತೆ ಜ್ಯೋತಿ ಎಂ. ಮರಗೋಳ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT