ಕಲಬುರ್ಗಿ: ತಾಲ್ಲೂಕಿನ ಮಹಾಗಾಂವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿಯಡಿ ಕೆಲಸ ಮಾಡಿದವರ ಕೂಲಿ ಹಣವನ್ನು ಕೂಡಲೇ ನೀಡಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ,ಕರ್ನಾಟಕ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಸಮಿತಿ ಪದಾಧಿಕಾರಿಗಳು ಮಹಾಗಾಂವ್ ಗ್ರಾಮ ಪಂಚಾಯಿತಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
‘ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಾಗಾಂವ್ ಮತ್ತು ಮಹಾಗಾಂವ್ ವಾಡಿಯ ಕೂಲಿಕಾರರು ಉದ್ಯೋಗ ಖಾತ್ರಿ ಯೋಜನೆಯಡಿ ಅರ್ಜಿ ಸಲ್ಲಿಸಿ, ಒಂದು ತಿಂಗಳಾದರೂ ಇಲ್ಲಿಯವರೆಗೆ ಕೆಲಸ ನೀಡಿಲ್ಲ’ ಎಂದು ಅವರು ಆರೋಪಿಸಿದರು.
‘ಕಳೆದ ವರ್ಷ ಸುಮಾರು 100 ಜನ ಕೂಲಿಕಾರರು ಕೆಲಸ ಮಾಡಿದ್ದಾರೆ. ಅವರಿಗೆ ಈವರೆಗೆ ವೇತನ ಪಾವತಿಸಿಲ್ಲ. ಪ್ರಸಕ್ತ ಸಾಲಿನಲ್ಲೂ 200 ಜನರ ಕೂಲಿಕಾರರು ಕೆಲಸ ಮಾಡಿದ್ದಾರೆ. ಅವರಿಗೆ ಎರಡು ವಾರದ ಬಾಕಿ ಉಳಿಸಿಕೊಳ್ಳಲಾಗಿದೆ. ತಕ್ಷಣವೇ ಬಾಕಿ ಕೂಲಿ ಹಣ ಬಿಡುಗಡೆಗೊಳಿಸಬೇಕು’ ಎಂದು ಘೋಷಣೆ ಕೂಗಿದರು.
ಕರ್ನಾಟಕ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಸಮಿತಿ ಅಧ್ಯಕ್ಷೆ ಜಯಶ್ರೀ ಎಂ. ಕಟ್ಟಿಮನಿ, ಮುಖಂಡ ಮೋಹನ್ ಎಂ. ಕಟ್ಟಿಮನಿ, ಶೋಭಾ ಹಸನಪೇಟ್, ಮಾಲನಬಿ ಮಹಾಗಾಂವ್‍ವಾಡಿ, ಮೀಯಾನ್ ದೊಡ್ಮನಿ, ಶ್ರೀಧರ ಸಿಂಗೆ, ಸುನೀತಾ ಕಂದಗೂಳ, ನಿಂಗಮ್ಮ ಕಟ್ಟಿಮನಿ ಮತ್ತು ಗ್ರಾಮಸ್ಥರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.