ADVERTISEMENT

ಕಲಬುರಗಿ | ಲೋಕ ಅದಾಲತ್‍: 2.05 ಲಕ್ಷ ಪ್ರಕರಣ ಇತ್ಯರ್ಥ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2025, 5:14 IST
Last Updated 15 ಸೆಪ್ಟೆಂಬರ್ 2025, 5:14 IST
   

ಕಲಬುರಗಿ: ಕರ್ನಾಟಕ ಹೈಕೋರ್ಟ್‌ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಡಿಯಲ್ಲಿ ಶನಿವಾರ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್‍ದಲ್ಲಿ ಒಟ್ಟು 2,05,685 ಪ್ರಕರಣಗಳು ಇತ್ಯರ್ಥವಾಗಿವೆ.

ಅದಾಲತ್‌ನಲ್ಲಿ 8,699 ಬಾಕಿ ಪ್ರಕರಣಗಳು ಹಾಗೂ 1,96,986 ವ್ಯಾಜ್ಯಪೂರ್ವ ಪ್ರಕರಣಗಳು ಇತ್ಯರ್ಥ ಆಗಿವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ತಿಳಿಸಿದ್ದಾರೆ.

10 ವರ್ಷಗಳಿಗಿಂತ ಹೆಚ್ಚಿನ ಅವಧಿಯ 1 ಪ್ರಕರಣ ಹಾಗೂ 5 ವರ್ಷಗಳಿಗಿಂತ ಹೆಚ್ಚಿನ ಅವಧಿಯ 4 ಪ್ರಕರಣಗಳನ್ನು ಸಹ ರಾಜಿ ಮಾಡಿಸಿದ್ದು, ಜಿಲ್ಲೆಯಲ್ಲಿ ಮೆಗಾ ಲೋಕ್ ಅದಾಲತ್‍ ಯಶಸ್ವಿಯಾಗಿದೆ.

ADVERTISEMENT

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜಿ.ಎಲ್. ಲಕ್ಷ್ಮೀನಾರಾಯಣ ಸೇರಿದಂತೆ ಜಿಲ್ಲೆಯ ಎಲ್ಲಾ ನ್ಯಾಯಾಧೀಶರು, ವಕೀಲರು, ಸಾರ್ವಜನಿಕರು ಹಾಗೂ ಕಕ್ಷಿದಾರರ ಸಹಕಾರದಿಂದ ರಾಷ್ಟ್ರೀಯ ಲೋಕ ಅದಾಲತ್ ನಡೆಸಲಾಗಿದೆ. ಸಿವಿಲ್ ದಾವೆಗಳು, ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳು, ರಾಜಿಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು, ಚೆಕ್ ಪ್ರಕರಣಗಳು, ಭೂಸ್ವಾಧೀನ ಪರಿಹಾರ ವಸೂಲಾತಿ ಪ್ರಕರಣಗಳು, ಬ್ಯಾಂಕ್‍ಗಳಿಗೆ ಸಂಬಂಧಿಸಿದ ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.