ADVERTISEMENT

ಚಿಂಚೋಳಿ: ರಾಷ್ಟ್ರೀಯ ಮತದಾರರ ದಿನ ಆಚರಣೆ

​ಪ್ರಜಾವಾಣಿ ವಾರ್ತೆ
Published 25 ಜನವರಿ 2022, 14:10 IST
Last Updated 25 ಜನವರಿ 2022, 14:10 IST
ಚಿಂಚೋಳಿಯ ಆದರ್ಶ ವಿದ್ಯಾಲಯದಲ್ಲಿ ಮಂಗಳವಾರ ನಡೆದ ಮತದಾರರ ದಿನಾಚರಣೆಯಲ್ಲಿ ತಹಶೀಲ್ದಾರ್ ಅಂಜುಮ ತಬಸ್ಸುಮ ಅವರು ಮಕ್ಕಳಿಗೆ ಮತದಾರರ ನೋಂದಣಿಯ ಪ್ರಚಾರ ಪತ್ರಗಳನ್ನು ವಿತರಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ಲಕ್ಷ್ಮಣ ಆವುಂಟಿ, ಪ್ರಾಂಶುಪಾಲ ನಾಗಶೆಟ್ಟಿ ಭದ್ರಶೆಟ್ಟಿ, ಗ್ರೇಡ್-2 ತಹಶೀಲ್ದಾರ ವೆಂಕಟೇಶ ದುಗ್ಗನ್ ಇದ್ದರು
ಚಿಂಚೋಳಿಯ ಆದರ್ಶ ವಿದ್ಯಾಲಯದಲ್ಲಿ ಮಂಗಳವಾರ ನಡೆದ ಮತದಾರರ ದಿನಾಚರಣೆಯಲ್ಲಿ ತಹಶೀಲ್ದಾರ್ ಅಂಜುಮ ತಬಸ್ಸುಮ ಅವರು ಮಕ್ಕಳಿಗೆ ಮತದಾರರ ನೋಂದಣಿಯ ಪ್ರಚಾರ ಪತ್ರಗಳನ್ನು ವಿತರಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ಲಕ್ಷ್ಮಣ ಆವುಂಟಿ, ಪ್ರಾಂಶುಪಾಲ ನಾಗಶೆಟ್ಟಿ ಭದ್ರಶೆಟ್ಟಿ, ಗ್ರೇಡ್-2 ತಹಶೀಲ್ದಾರ ವೆಂಕಟೇಶ ದುಗ್ಗನ್ ಇದ್ದರು   

ಚಿಂಚೋಳಿ: ವಯಸ್ಕ ಮತದಾನ ಪದ್ಧತಿ ಭಾರತ ದೇಶದಲ್ಲಿ ಜಾರಿಯಲ್ಲಿದೆ. ಅದರಂತೆ 18 ವರ್ಷ ವಯಸ್ಸಿನವರು ಮತದಾರರ ನೋಂದಣಿಗೆ ಅರ್ಹರಾಗಿದ್ದು, ನಿಮ್ಮ ಮನೆಯಲ್ಲಿ ಯಾರಾದರೂ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಆನಲೈನ್ ಮೂಲಕ ಅರ್ಜಿ ಸಲ್ಲಿಸಿ ಮತದಾರರ ನೋಂದಣಿ ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಅಂಜುಮ ತಬುಸ್ಸುಮ್ ತಿಳಿಸಿದರು.

ಇಲ್ಲಿನ ಪೋಲಕಪಳ್ಳಿಯ ಆದರ್ಶ ವಿದ್ಯಾಲಯದಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಅವರು ಮಕ್ಕಳಿಗೆ ಮತದಾರರ ನೋಂದಣಿಯ ಪ್ರಚಾರ ಪತ್ರಗಳನ್ನು ಮಕ್ಕಳಿಗೆ ವಿತರಿಸಿ ಮಾತನಾಡಿದರು.

ದೇಶದ ಏಳಿಗೆಗೆ ಮತದಾನ ಅತ್ಯವಶ್ಯಕ. ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ಚುನಾವಣೆಗಳನ್ನು ಯಶಸ್ವಿಗೊಳಿಸಬೇಕು ಮತ್ತು ನಿಮ್ಮ ಪ್ರತಿನಿಧಿಯನ್ನು ನೀವೇ ಆರಿಸಿಕೊಳ್ಳಬೇಕೆಂದು ಅವರು ಕರೆ ನೀಡಿದರು.

ADVERTISEMENT

ಭಾರತ ಚುನಾವಣಾ ಆಯೋಗ ಮತ್ತು ರಾಜ್ಯ ಚುನಾವಣಾ ಆಯೋಗದ ಕುರಿತು ಮಾಹಿತಿ ನೀಡಿದ ಪ್ರಾಂಶುಪಾಲ ನಾಗಶೆಟ್ಟಿ ಭದ್ರಶೆಟ್ಟಿ ಅವರು ಪ್ರಜಾಪ್ರಭುತ್ವದಲ್ಲಿ ಚುನಾವಣೆಗಳ ಮಹತ್ವ ವಿವರಿಸಿದರು.

ಎಸ್‌ಡಿಎಂಸಿ ಅಧ್ಯಕ್ಷ ಲಕ್ಷ್ಮಣ ಅವುಂಟಿ ಲೋಕಸಭೆ, ರಾಜ್ಯ ಸಭೆ, ವಿಧಾನ ಸಭೆ, ವಿಧಾನ ಪರಿಷತ್ ಮತ್ತು ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಬಗ್ಗೆ ಮಾಹಿತಿ ನೀಡಿದರು.

ಗ್ರೇಡ್– 2 ತಹಶೀಲ್ದಾರ್ ವೆಂಕಟೇಶ ದುಗ್ಗನ್, ಶಿರಸ್ತೇದಾರ ಸುಭಾಷ ನಿಡಗುಂದಿ, ಕಂದಾಯ ನಿರೀಕ್ಷಕ ರವಿ ಪಾಟೀಲ, ಶೋಯೇಬ್, ಮಕ್ದುಮ್, ಮಲ್ಲಿಕಾರ್ಜುನ ಮರಪಳ್ಳಿ ಇದ್ದರು.

ಸುರೇಶ ಲಮಾಣಿ ಸ್ವಾಗತಿಸಿದರು. ಶಶಿಧರ ನಿರೂಪಿಸಿದರು. ಕಿಶನ್ ವಂದಿಸಿದರು.‌

ಇದೇ ವೇಳೆ ಮಕ್ಕಳಿಗೆ ಮತದಾರರ ಪ್ರತಿಜ್ಞಾವಿಧಿ ಭೋಧಿಸಿದ ತಹಶೀಲ್ದಾರ ಅಂಜುಮ ತಬಸ್ಸುಮ ನಂತರ ಮಕ್ಕಳು ಬಿಡಿಸಿದ ಮತದಾರರ ದಿನಾಚರಣೆಯ ಮಹತ್ವ ಕುರಿತ ಹಾಗೂ ಕೋವಿಡ್ ಮಾರ್ಗಸೂಚಿಗಳ ಮಹತ್ವ ಸಾರುವ ಚಿತ್ರಗಳ ಪ್ರದರ್ಶನ ವೀಕ್ಷಿಸಿ ಮೆಚ್ಚುಗೆ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.