ADVERTISEMENT

‘ಬಸವ ಪುತ್ಥಳಿ ನಿರ್ಮಾಣಕ್ಕೆ ಸ್ಥಳ ಕಲ್ಪಿಸಿ’

​ಪ್ರಜಾವಾಣಿ ವಾರ್ತೆ
Published 11 ಜುಲೈ 2021, 12:46 IST
Last Updated 11 ಜುಲೈ 2021, 12:46 IST
ಜೇವರ್ಗಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ಬಸವಣ್ಣನವರ ಪುತ್ಥಳಿ ನಿರ್ಮಾಣಕ್ಕೆ ಸ್ಥಳಾವಕಾಶ ಕಲ್ಪಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು
ಜೇವರ್ಗಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ಬಸವಣ್ಣನವರ ಪುತ್ಥಳಿ ನಿರ್ಮಾಣಕ್ಕೆ ಸ್ಥಳಾವಕಾಶ ಕಲ್ಪಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು   

ಜೇವರ್ಗಿ: ಪಟ್ಟಣದ ಬಸವೇಶ್ವರ ವೃತ್ತದ ಹತ್ತಿರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ವಿಶ್ವಗುರು ಬಸವಣ್ಣನವರ ಪುತ್ಥಳಿ ನಿರ್ಮಾಣಕ್ಕೆ ಸ್ಥಳಾವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿ ಜೇವರ್ಗಿ ವೀರಶೈವ ಸಮಾಜ ತಾಲ್ಲೂಕು ಘಟಕದ ವತಿಯಿಂದ ಶನಿವಾರ ಕಲಬುರ್ಗಿ ನಗರಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಪಟ್ಟಣದಲ್ಲಿ ನಿರ್ಮಿಸುತ್ತಿರುವ ಬಸವ ಭವನ ಕಾಮಗಾರಿ ಅರ್ಧಕ್ಕೆ ನಿಂತಿದೆ. ಕೂಡಲೇ ರಾಜ್ಯ ಸರ್ಕಾರದಿಂದ ಅಗತ್ಯ ಅನುದಾನ ಬಿಡುಗಡೆಗೊಳಿಸುವ ಮೂಲಕ ಬಸವ ಭವನ ಕಾಮಗಾರಿ ಪೂರ್ಣಗೊಳಿಸಲು ಸಹಕಾರ ನೀಡಬೇಕು. ವೀರಶೈವ ಲಿಂಗಾಯತ ಸಮಾಜದ ಮುಖಂಡರ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಹಲ್ಲೆ ಪ್ರಕರಣಗಳನ್ನು ತಡೆಗಟ್ಟಬೇಕು ಎಂದರು.

ವೀರಶೈವ ಲಿಂಗಾಯತ ಸಮಾಜದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಅನುಕೂಲವಾಗಲು ಮೆಟ್ರಿಕ್ ನಂತರದ ವಸತಿ ನಿಲಯ ಮಂಜೂರು ಮಾಡಿ ₹ 50 ಲಕ್ಷ ಅನುದಾನ ಬಿಡುಗಡೆ ಮಾಡಬೇಕು ಎಂದು ವೀರಶೈವ ಸಮಾಜ ತಾಲ್ಲೂಕು ಘಟಕದ ಪದಾಧಿಕಾರಿಗಳು ಮುಖ್ಯಮಂತ್ರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ADVERTISEMENT

ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಸಿದ್ಧರಾಮ ಸಾಹು ಅಂಗಡಿ, ಅಶೋಕ ಪಾಟೀಲ ಗುಡೂರ, ಬಸವ ಕೇಂದ್ರ ತಾಲ್ಲೂಕು ಘಟಕದ ಅಧ್ಯಕ್ಷ ಶರಣಬಸವ ಕಲ್ಲಾ, ಬಾಪುಗೌಡ ಪಾಟೀಲ ಬಿರಾಳ, ಆದಪ್ಪ ಸಾಹು ಸಿಕೇದ್, ಯಶವಂತರಾಯ ಸಂಕಾ ಬಣಮಿ, ನೀಲಕಂಠ ಅವಂಟಿ, ಬಸವರಾಜ ಪಾಟೀಲ ನರಿಬೋಳ, ಮಲ್ಲಿಕಾರ್ಜುನ ಬಿರಾದಾರ ಸೊನ್ನ, ಬಸವರಾಜ ಪಾಟೀಲ ಕೆಲ್ಲೂರ, ಬಸವರಾಜಗೌಡ ಬಿರಾಳ (ಕೆ), ಪ್ರಭು ಪಾಟೀಲ ಕುರಳಗೇರಾ, ರವಿ ಪಡಶೆಟ್ಟಿ, ಶಾಂತಗೌಡ ಪಾಟೀಲ ನರಿಬೋಳ, ಶಿವುಗೌಡ ಪಾಟೀಲ ಕೆಲ್ಲೂರ, ತಿಪ್ಪಣ್ಣ ಹಡಪದ ನರಿಬೋಳ, ವಿಶಾಲ ಭಂಕೂರ, ರಾಜೇಶ ಸಜ್ಜನ್, ಸಿದ್ದು ಸ್ಥಾವರಮಠ ಸೇರಿ ಸಮಾಜದ ಮುಂಖಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.