ADVERTISEMENT

ಪ್ರೊ.ನಾಗರಾಜು ಕೇಂದ್ರೀಯ ವಿ.ವಿ ಪ್ರಭಾರ ಕುಲಪತಿ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2020, 4:02 IST
Last Updated 14 ನವೆಂಬರ್ 2020, 4:02 IST
ಅಧಿಕಾರವಧಿ ಮುಗಿದಿದ್ದರಿಂದ ಕರ್ನಾಟಕ ಕೇಂದ್ರೀಯ ವಿ.ವಿ.ಯ ನಿರ್ಗಮಿತ ಕುಲಪತಿ ಪ್ರೊ.ಎಚ್‌.ಎಂ.ಮಹೇಶ್ವರಯ್ಯ ಅವರು ಹಿರಿಯ ಪ್ರಾಧ್ಯಾಪಕ ಪ್ರೊ.ಎನ್. ನಾಗರಾಜು ಅವರಿಗೆ ಶುಕ್ರವಾರ ಅಧಿಕಾರ ಹಸ್ತಾಂತರಿಸಿದರು
ಅಧಿಕಾರವಧಿ ಮುಗಿದಿದ್ದರಿಂದ ಕರ್ನಾಟಕ ಕೇಂದ್ರೀಯ ವಿ.ವಿ.ಯ ನಿರ್ಗಮಿತ ಕುಲಪತಿ ಪ್ರೊ.ಎಚ್‌.ಎಂ.ಮಹೇಶ್ವರಯ್ಯ ಅವರು ಹಿರಿಯ ಪ್ರಾಧ್ಯಾಪಕ ಪ್ರೊ.ಎನ್. ನಾಗರಾಜು ಅವರಿಗೆ ಶುಕ್ರವಾರ ಅಧಿಕಾರ ಹಸ್ತಾಂತರಿಸಿದರು   

ಕಲಬುರ್ಗಿ: ಇಲ್ಲಿನ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಚ್‌.ಎಂ. ಮಹೇಶ್ವರಯ್ಯ ಅವರ ಅಧಿಕಾರವಧಿ ಶುಕ್ರವಾರ ಮುಕ್ತಾಯವಾಗಿದ್ದರಿಂದ, ವಿ.ವಿ.ಯ ಇಂಗ್ಲಿಷ್ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ. ಎನ್. ನಾಗರಾಜು ಅವರು ಪ್ರಭಾರ ಕುಲಪತಿಯಾಗಿ ಅಧಿಕಾರ ವಹಿಸಿಕೊಂಡರು.

ಮಹೇಶ್ವರಯ್ಯ ಅವರು ಅಧಿಕಾರ ಹಸ್ತಾಂತರಿಸಿದರು.

ಶೋಧನಾ ಸಮಿತಿಯು ಕುಲಪತಿ ಹುದ್ದೆಗೆ ಐವರು ಹೆಸರನ್ನು ಶಿಫಾರಸು ಮಾಡಿದ್ದು, ಅದಕ್ಕೆ ಮಾನವ ಸಂಪನ್ಮೂಲ ಸಚಿವಾಲಯ ಅನುಮೋದನೆ ನೀಡಬೇಕಿದ್ದು, ಬಳಿಕ ರಾಷ್ಟ್ರಪತಿಗಳ ಅಂಕಿತದೊಂದಿಗೆ ಆದೇಶ ಹೊರಬೀಳಲಿದೆ. ಅಲ್ಲಿಯವರೆಗೆ ಪ್ರಭಾರ ಕುಲಪತಿಯಾಗಿ ನಾಗರಾಜು ಕಾರ್ಯನಿರ್ವಹಿಸಲಿದ್ದಾರೆ. ಪ್ರೊ.ಮಹೇಶ್ವರಯ್ಯ ಅವರಿಗೆ ಇದೇ 14ರಂದು 70 ವರ್ಷ ತುಂಬಲಿದ್ದು, ಅಧಿಕಾರವಧಿ ಮುಗಿದಿದ್ದರಿಂದ ಹಿರಿಯ ಪ್ರಾಧ್ಯಾಪಕರಿಗೆ ಪ್ರಭಾರ ಅಧಿಕಾರ ವಹಿಸುವಂತೆ ಮಾನವ ಸಂಪನ್ಮೂಲ ಸಚಿವಾಲಯ ಸೂಚಿಸಿತ್ತು.

ADVERTISEMENT

ಇದಕ್ಕೂ ಮುನ್ನ ವಿ.ವಿಯ ವಿವಿಧ ವಿಭಾಗಗಳ ಡೀನ್‌ಗಳು, ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿ ನಿರ್ಗಮಿತ ಕುಲಪತಿ ಪ್ರೊ. ಮಹೇಶ್ವರಯ್ಯ ಅವರನ್ನು ಅಭಿನಂದಿಸಿ ಬೀಳ್ಕೊಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.