ಚಿಂಚೋಳಿ ತಾಲ್ಲೂಕಿನ ಐನೋಳ್ಳಿಯ ಶಶಿಧರ ನಾಗಶೆಟ್ಟಿ ಪುಣ್ಯಶೆಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೋಟ್‌ಪುಸ್ತಕಗಳನ್ನು ವಿತರಿಸಲಾಯಿತು
ಚಿಂಚೋಳಿ: ತಾಲ್ಲೂಕಿನ ಐನೊಳ್ಳಿಯ ಶಶಿಧರ ನಾಗಶೆಟ್ಟಿ ಪುಣ್ಯಶೆಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಜ್ಯಸಭೆಯ ವಿರೋಧಪಕ್ಷದ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ 83ನೇ ಜನ್ಮ ದಿನಾಚರಣೆಯನ್ನು ಶಾಲಾ ಮಕ್ಕಳಿಗೆ ನೋಟ್‌ಪುಸ್ತಕ ವಿತರಿಸಿ ಸಸಿ ನೆಟ್ಟು ಆಚರಿಸಲಾಯಿತು.
ಎಸ್‌ಡಿಎಂಸಿ ಅಧ್ಯಕ್ಷರಾದ ಅಶೋಕ ಭಜಂತ್ರಿ, ಗ್ರಾ.ಪಂ.ಸದಸ್ಯ ಆಸೀಫ್ ಹೂಡಾ, ಮುಖಂಡರಾದ ನೀಲಕಂಠ ಹುಡಗಿ, ಅಲ್ಲಾವುದ್ದಿನ್ ಅನ್ಸಾರಿ, ಬಾಬುರಾವ್ ಮೇತ್ರಿ, ಗ್ರಾ.ಪಂ.ಮಾಜಿ ಸದಸ್ಯ ಲೋಕೇಶ ಐನೊಳ್ಳಿ, ನಿವೃತ್ತ ಶಿಕ್ಷಕ ಸುಭಾಶ್ಚಂದ್ರ ಹಿರೇಮನಿ, ಶಿಕ್ಷಕರಾದ ರಾಚಯ್ಯಸ್ವಾಮಿ ಕೋಡ್ಲಿ ಹಾಗೂ ವಿದ್ಯಾರ್ಥಿಗಳು, ಸಿಬ್ಬಂದಿ ಹಾಜರಿದ್ದರು.
ಶಾಲೆಯ 100 ವಿದ್ಯಾರ್ಥಿಗಳಿಗೆ ತಲಾ ಎರಡು ನೋಟ್‌ಬುಕ್ ಹಾಗೂ ಎರಡು ಪೆನ್ನುಗಳನ್ನು ವಿತರಿಸಿ 11 ಸಸಿಗಳನ್ನು ನೆಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.