ಕಲಬುರಗಿ: ನಗರದ ನ್ಯಾಷನಲ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು.
ಮುಸ್ಸಂಜೆ ವಾತಾವರಣದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ರಾಜ್ಯಗಳ ನೃತ್ಯಪ್ರಕಾರಗಳ ಪ್ರಸ್ತುತಪಡಿಸುವ ಮೂಲಕ ‘ಭಾರತದ ಸಾಂಸ್ಕೃತಿಕ ವೈವಿಧ್ಯ’ವನ್ನು ವೇದಿಕೆ ಮೇಲೆ ಅನಾವರಣಗೊಳಿಸಿದರು.
ಕಲಬುರಗಿ ನಗರ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ. ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನ್ಯಾಷನಲ್ ಪಬ್ಲಿಕ್ ಶಾಲೆ ಹಾಗೂ ಪಿಯು ಕಾಲೇಜಿನ ಅಧ್ಯಕ್ಷ ಶಶೀಲ್ ನಮೋಶಿ, ಉಪಾಧ್ಯಕ್ಷ ವೀರಶೆಟ್ಟಿ ಖೇಣಿ, ಕಾರ್ಯದರ್ಶಿ ಸುರೇಶ ಬುಲಬುಲೆ, ಖಜಾಂಚಿ ಸಂಪತಕುಮಾರ್ ಲೋಯಾ, ಜಂಟಿ ಕಾರ್ಯದರ್ಶಿ ಚಂದ್ರಶೇಖರ ರೆಡ್ಡಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಶಾಲೆಯ ಪ್ರಾಚಾರ್ಯರು ವಾರ್ಷಿಕ ವರದಿ ಮಂಡಿಸಿದರು. ಅತಿಥಿಗಳ ಭಾಷಣ ಸ್ಫೂರ್ತಿದಾಯಕವಾಗಿತ್ತು. ದೀಪ ಬೆಳಗುವುದರೊಂದಿಗೆ ಆರಂಭವಾದ ಕಾರ್ಯಕ್ರಮವು ರಾಷ್ಟ್ರಗೀತೆಯೊಂದಿಗೆ ಸಂಪನ್ನಗೊಂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.