
ಕಲಬುರಗಿ: ‘ರಾಷ್ಟ್ರೀಯ ಸೇವಾ ಯೋಜನೆಯ ಪ್ರತಿ ವಿದ್ಯಾರ್ಥಿಗೂ ಶಿಸ್ತು ಕಲಿಸುವ ಸೇತುವೆ’ ಎಂದು ಕನ್ನಡ ವಿಭಾಗದ ನಿರ್ದೇಶಕ ಎಚ್.ಟಿ.ಪೋತೆ ಹೇಳಿದರು.
ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ನಡೆದ ಅಂತರ್ ಮಹಾವಿದ್ಯಾಲಯಗಳ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮ ಸಂಯೋಜಕ ಎಚ್.ಎಸ್ ಜಂಗೆ ಪ್ರಾಸ್ತಾವಿಕವಾಗಿ ಮಾತನಾಡಿ, ‘ರಾಷ್ಟ್ರೀಯ ಸೇವಾ ಯೋಜನೆ ಒಂದು ಉದಾತ್ತ, ಮೌಲ್ಯಾಧಾರಿತ ಯುವ ಜನತೆಯ ಯೋಜನೆ. ಯುವಕರು ಅತ್ಯತ್ತಮ ನಾಗರಿಕರಾಗಿ ರಾಷ್ಟ್ರ ನಿರ್ಮಾಣ, ಗ್ರಾಮೀಣ ಅಭಿವೃದ್ಧಿಯಲ್ಲಿ ನೇರವಾಗಿ ಪಾಲ್ಗೊಳ್ಳಬೇಕು ಎಂಬ ಮಹಾತ್ಮ ಗಾಂಧಿ ಅವರ ಕನಸು ನನಸು ಮಾಡಲು ಮೂಡಿ ಬಂದಿದೆ’ ಎಂದು ಹೇಳಿದರು.
ಕುಲಸಚಿವ ಪ್ರೊ.ರಮೇಶ ಲಂಡನಕರ, ಸಿಂಡಿಕೇಟ್ ಸದಸ್ಯ ಸಿದ್ದಪ್ಪ ಸುಳ್ಳದ, ಪ್ರಕಾಶ ಕೊಬಾಳಕರ, ವಿದ್ಯಾಸಾಗರ, ಅವನಾಶ, ಅಂಬರೀಶ್ ರೆಡ್ಡಿ ಸೇರಿದಂತೆ ವಿವಿಧ ಕಾಲೇಜುಗಳ ಶಿಬಿರಾರ್ಥಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.