ಕವಿತಾಳ: ಪಟ್ಟಣದ 30 ಹಾಸಿಗೆ ಸಾಮರ್ಥ್ಯದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುರೇಂದ್ರಬಾಬು, ಮಾನ್ವಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶರಣಬಸವರಾಜಗೌಡ ಮತ್ತು ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಗಣೇಶ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.
‘ಮಳೆಗೆ ಸೋರುವ ಆರೋಗ್ಯ ಕೇಂದ್ರದ ಕಟ್ಟಡ’ ಶಿರ್ಷಿಕೆಯಡಿ ‘ಪ್ರಜಾವಾಣಿ’ಯಲ್ಲಿ ಅ.4ರಂದು ವಿಶೇಷ ವರದಿ ಪ್ರಕಟವಾಗಿತ್ತು. ವರದಿಗೆ ಸ್ಪಂದಿಸಿದ ಅಧಿಕಾರಿಗಳು ಮಂಗಳವಾರ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.
‘ಚಾವಣಿ ಮೇಲಿನ ತ್ಯಾಜ್ಯ ತೆರವುಗೊಳಿಸಿ ತಾತ್ಕಾಲಿಕ ದುರಸ್ತಿ ಕೈಗೊಳ್ಳಲು ಎಂಜಿನಿಯರ್‌ಗೆ ಭೇಟಿ ನೀಡಿ ಪರಿಶೀಲಿಸಲು ಸೂಚಿಸಲಾಗಿದೆ. ಈಚೆಗೆ ಸಚಿವ ಎನ್.ಎಸ್.ಬೋಸರಾಜು ಮತ್ತು ಶಾಸಕ ಜಿ.ಹಂಪಯ್ಯ ನಾಯಕ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದು, ಹೆಚ್ಚಿನ ಅನುದಾನ ನೀಡಲು ಅವರಲ್ಲಿ ಮನವಿ ಮಾಡಲಾಗುವುದು’ ಎಂದು ಡಿಎಚ್‌ಒ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.