ADVERTISEMENT

ಖಾಸಗಿ ಬಸ್ ಉರುಳಿ 30ಕ್ಕೂ ಅಧಿಕ ಜನರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 1 ಜೂನ್ 2022, 16:14 IST
Last Updated 1 ಜೂನ್ 2022, 16:14 IST

ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಕಣ್ಣಿ ಗ್ರಾಮದ ಹೊರವಲಯದಲ್ಲಿ ಬುಧವಾರ ಸಂಜೆ ಮದುವೆ ದಿಬ್ಬಣಕ್ಕೆ ತೆರಳಿದ್ದ ಖಾಸಗಿ ಬಸ್ ಉರುಳಿ ಬಿದ್ದ ಪರಿಣಾಮ ಮೂವತ್ತಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳನ್ನು ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತಕ್ಕೀಡಾದ ಬಸ್ಸಿನಲ್ಲಿದ್ದವರು ಹಾವನೂರ ಗ್ರಾಮದವರು. ಕಲಬುರಗಿಯಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದರು. ವಾಪಸ್ ಹಾವನೂರು ಗ್ರಾಮಕ್ಕೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ.

ADVERTISEMENT

ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಹಳ್ಳಕ್ಕೆ ಬಿದ್ದಿದ್ದರಿಂದ ಗಾಯಾಳುಗಳ ಸಂಖ್ಯೆ ಹೆಚ್ಚಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.