ADVERTISEMENT

ಸೇಡಂ: ಯಾನಾಗುಂದಿಯಿಂದ ಡಾ.ಶರಣಪ್ರಕಾಶ ಪಾದಯಾತ್ರೆ

​ಪ್ರಜಾವಾಣಿ ವಾರ್ತೆ
Published 29 ಜುಲೈ 2022, 8:44 IST
Last Updated 29 ಜುಲೈ 2022, 8:44 IST
ಕಲಬುರಗಿ ಜಿಲ್ಲೆ ಸೇಡಂ ತಾಲ್ಲೂಕಿನ ಯಾನಾಗುಂದಿಯಿಂದ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಡಾ. ಶರಣಪ್ರಕಾಶ ಪಾಟೀಲ ಪಾದಯಾತ್ರೆ ಆರಂಭಿಸಿದರು
ಕಲಬುರಗಿ ಜಿಲ್ಲೆ ಸೇಡಂ ತಾಲ್ಲೂಕಿನ ಯಾನಾಗುಂದಿಯಿಂದ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಡಾ. ಶರಣಪ್ರಕಾಶ ಪಾಟೀಲ ಪಾದಯಾತ್ರೆ ಆರಂಭಿಸಿದರು   

ಸೇಡಂ (ಕಲಬುರಗಿ ಜಿಲ್ಲೆ): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ತಾಲ್ಲೂಕಿನ ಯಾನಾಗುಂದಿ ಗ್ರಾಮದಿಂದ ಮಾಜಿ ಸಚಿವ, ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಡಾ.ಶರಣಪ್ರಕಾಶ ಪಾಟೀಲ ಶುಕ್ರವಾರ ಪಾದಯಾತ್ರೆ ಆರಂಭಿಸಿದರು.

ಯಾನಾಗುಂದಿಯ ಮಾತೆ ಮಾಣಿಕೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು. ಮಾಣಿಕ್ಯಗಿರಿಯಿಂದ ಯಾನಾಗುಂದಿ ಗ್ರಾಮದವರೆಗೆ ಪಾದಯಾತ್ರೆ ನಡೆಸಿದರು. ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಮತ್ತು ತಿರಂಗಾ ಧ್ವಜ ಹಿಡಿದು ಘೋಷಣೆಗಳನ್ನು ಕೂಗುತ್ತಾ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು. ಕಾರ್ಯಕರ್ತರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಗಣ್ಯರ ಭಾವಚಿತ್ರಗಳನ್ನು ಹಿಡಿದಿದ್ದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಗದೇವ ಗುತ್ತೇದಾರ್, ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ, ರವೀಂದ್ರ ಇಟಕಾಲ್, ಕಾಡಾ ಮಾಜಿ ಅಧ್ಯಕ್ಷ ಮಹಾಂತಪ್ಪ ಸಂಗಾವಿ, ತಿಪ್ಪಣ್ಣಪ್ಪ ಕಮಕನೂರ, ಸುಭಾಷ ರಾಠೋಡ, ವಿಶ್ವನಾಥ ಪಾಟೀಲ ಬೊಮ್ನಳ್ಳಿ, ಸತೀಶರೆಡ್ಡಿ ರಂಜೋಳ, ರವಿ ಸಾಹು, ಲಕ್ಷ್ಮಿಕಾಂತರಾವ ಕುಲಕರ್ಣಿ, ದಾಮೋದರರೆಡ್ಡಿ ಪಾಟೀಲ, ಮಧೂಸೂದನರೆಡ್ಡಿ ಪಾಟೀಲ, ಶ್ರೀನಿವಾಸರೆಡ್ಡಿ ದೇಶನಗರ್, ಅಶೋಕ ಫಿರಂಗಿ, ವಿಠ್ಠಲ ಕುಂಬಾರ, ರಮೇಶ, ಅಂಜಯ್ಯಗೌಡ, ರಾಜಶೇಖರ ಪುರಾಣಿಕ, ಸದಾಶಿವರೆಡ್ಡಿ, ಹೇಮ್ಲಾನಾಯಕ್, ನಾಜಿಮೋದ್ದಿನ್ ಸೇರಿದಂತೆ ಇನ್ನಿತರರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.