ಕಲಬುರಗಿಯ ಜಗತ್ ವೃತ್ತದಲ್ಲಿ ರಸ್ತೆ ಮೇಲೆ ಪಾಕ್‌ಧ್ವಜ ಅಂಟಿಸಿರುವುದು
ಕಲಬುರಗಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮನಲ್ಲಿ ಅಮಾಯಕರ ಮೇಲಿನ ಉಗ್ರರ ದಾಳಿ ಖಂಡಿಸಿ ನಗರದ ವಿವಿಧೆಡೆ ಕಡೆ ಪಾಕಿಸ್ತಾನದ ಧ್ವಜ ನೆಲಕ್ಕೆ ಅಂಟಿಸುವ ಮುಖಾಂತರ ಬಜರಂಗ ದಳದ ಕಾರ್ಯಕರ್ತರೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಜಗತ್ ವೃತ್ತ, ಆಳಂದ ನಾಕಾ, ಮಾರ್ಕೆಟ್ ಚೌಕ್, ಸಾತ್ ಗುಂಬಜ್ ಸೇರಿ 20ಕ್ಕೂ ಹೆಚ್ಚಿನ ಸ್ಥಳಗಳಲ್ಲಿ ಧ್ವಜ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಮಾಹಿತಿ ಪಡೆದ ನಗರ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ಕಮಿಷನರ್ ಶರಣಪ್ಪ ಎಸ್. ಡಿ.,'ಪಹಲ್ಗಾಮನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಪ್ರತಿಭಟನಾರ್ಥವಾಗಿ ಪಾಕ್ ಧ್ವಜಗಳನ್ನು ನಗರದಲ್ಲಿ ಅಂಟಿಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಬಜರಂಗ ದಳದವರು ಇದನ್ನು ಮಾಡಿದ್ದಾರೆ. ಈ ಸಂಬಂಧ ಆರು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಉಗ್ರರ ದಾಳಿ ಖಂಡನೀಯ. ಅದರ ವಿರುದ್ಧದ ಪ್ರತಿಭಟನೆಯನ್ನು ಕಾನೂನಿನ ಚೌಕಟ್ಟಿನಲ್ಲಿ ನಡೆಸಬೇಕು. ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಕ್ರಮ ಜರುಗಿಸಬೇಕಾಗುತ್ತದೆ' ಎಂದು ಎಚ್ಚರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.