ADVERTISEMENT

ಪಹಲ್ಗಾಮ್‌ನಲ್ಲಿ ನಡೆದ ದಾಳಿಗೆ ಖಂಡನೆ: ರಸ್ತೆ ಮೇಲೆ ಪಾಕ್ ಧ್ವಜ ಅಂಟಿಸಿ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2025, 1:06 IST
Last Updated 26 ಏಪ್ರಿಲ್ 2025, 1:06 IST
ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಕಲಬುರಗಿಯಲ್ಲಿ ಶುಕ್ರವಾರ ರಸ್ತೆಗೆ ಪಾಕಿಸ್ತಾನ ಧ್ವಜದ ಸ್ಟಿಕ್ಕರ್‌ ಅಂಟಿಸಿರುವುದು
ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಕಲಬುರಗಿಯಲ್ಲಿ ಶುಕ್ರವಾರ ರಸ್ತೆಗೆ ಪಾಕಿಸ್ತಾನ ಧ್ವಜದ ಸ್ಟಿಕ್ಕರ್‌ ಅಂಟಿಸಿರುವುದು   

ಕಲಬುರಗಿ: ಜಮ್ಮು–ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಬಜರಂಗದಳದ ಕಾರ್ಯಕರ್ತರು ಶುಕ್ರವಾರ ನಗರದ ಹಲವೆಡೆ ಪಾಕಿಸ್ತಾನದ ಧ್ವಜದ ಸ್ಟಿಕ್ಕರ್‌ಗಳನ್ನು ರಸ್ತೆ ಮೇಲೆ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಜಗತ್ ವೃತ್ತ, ಆಳಂದ ನಾಕಾ, ಮಾರ್ಕೆಟ್ ಚೌಕ್, ಸಾಥ್‌ ಗುಂಬಜ್ ಸೇರಿದಂತೆ ಹಲವೆಡೆ ರಸ್ತೆಯ ಮೇಲೆ ಪಾಕಿಸ್ತಾನ ಧ್ವಜದ ದೊಡ್ಡ ಸ್ಟಿಕ್ಕರ್‌ಗಳನ್ನು ಅಂಟಿಸಲಾಗಿತ್ತು. ಆರಂಭದಲ್ಲಿ ‘ಇದು ಶಾಂತಿ–ಸೌಹಾರ್ದ ಕದಡಲು ಕಿಡಿಗೇಡಿಗಳು ನಡೆಸಿದ ಕೃತ್ಯ’ ಎಂಬ ಸುದ್ದಿ ಹರಡಿತ್ತು. ಆದರೆ, ಉಗ್ರರ ದಾಳಿ ಖಂಡಿಸಿ ಪ್ರತಿರೋಧ ವ್ಯಕ್ತಪಡಿಸಲು ಬಜರಂಗದಳವು ಹೀಗೆ ಮಾಡಿದೆ ಎಂಬುದು ಬಳಿಕ ಸ್ಪಷ್ಟವಾಯಿತು.

ವಿಷಯ ತಿಳಿದ ನಗರ ಪೊಲೀಸ್ ಕಮಿಷನರ್ ಶರಣಪ್ಪ ಎಸ್‌.ಡಿ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪೊಲೀಸರು ಸ್ಟ್ರಿಕ್ಕರ್‌ಗಳನ್ನು ತೆರವುಗೊಳಿಸಿದರು.

ADVERTISEMENT

‘ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ‌ ಖಂಡಿಸಿ ಬಜರಂಗದಳದ ಕಾರ್ಯಕರ್ತರು ಪಾಕಿಸ್ತಾನದ ಧ್ವಜದ ಸ್ಟಿಕ್ಕರ್‌ಗಳನ್ನು ರಸ್ತೆಗೆ ಅಂಟಿಸಿ ಪ್ರತಿಭಟನೆ ದಾಖಲಿಸಿದ್ದಾರೆ. ಇದಕ್ಕೆ ಯಾವುದೇ ಅನುಮತಿ ಪಡೆದಿರಲಿಲ್ಲ. ಹೀಗಾಗಿ ಗೊಂದಲ ಸೃಷ್ಟಿಯಾಗಿತ್ತು. ಈ ಸಂಬಂಧ ಆರು ಮಂದಿಯನ್ನು ಬ್ರಹ್ಮಪುರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ’ ಎಂದು ನಗರ ಪೊಲೀಸ್‌ ಕಮಿಷನರ್‌ ಶರಣಪ್ಪ ಎಸ್‌.ಡಿ. ಪ್ರತಿಕ್ರಿಯಿಸಿದ್ದಾರೆ.

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತರು ಶುಕ್ರವಾರ ರಸ್ತೆಗೆ ಪಾಕಿಸ್ತಾನ ಧ್ವಜದ ಸ್ಟಿಕ್ಕರ್‌ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.